ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಯ ಗೋ ಹತ್ಯೆ ನಿಷೇಧ ವಿಧೇಯಕ
ಬೆಂಗಳೂರು:
ಪ್ರಸ್ತುತ ವಿಧಾನಮಂಡಲ ಅಧಿವೇಶನದಲ್ಲೇ ಗೋಹತ್ಯೆ ನಿಷೇಧ ವಿಧೇಯಕ ಮಂಡನೆಯಾಗಲಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ, ಮಧ್ಯಪ್ರದೇಶದ ಮಾದರಿಯಲ್ಲಿ ಕಾಯ್ದೆ ಜಾರಿಗೆ ತರಲಾಗುವುದು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆಯೂ ಚರ್ಚಿಸಿದ್ದೇವೆ. ಕಾಂಗ್ರೆಸ್ ನವರು ಏನು ಬೇಕಾದರೂ ಹೇಳಲಿ ಎಂದು ಹೇಳಿದರು.
ಗುಜರಾತ್ ಮತ್ತು ಉತ್ತರ ಪ್ರದೇಶದ ಕಾನೂನುಗಳನ್ನು ಪರಿಶೀಲಿಸಿದ್ದೇವೆ. ಈ ಅಧಿವೇಶನದಲ್ಲೇ ಬಲವಾದ ಕಾನೂನು ತರುತ್ತೇವೆ. ಕಾಂಗ್ರೆಸ್ ನವರು ಮಾಡುವುದನ್ನು ಮಾಡಲಿ, ನಾವು ಮಾಡಬೇಕಿರುವುದನ್ನು ನಾವು ಮಾಡುತ್ತೇವೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು.
ಇದನ್ನೂ ಓದಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭೇಟಿ ಮಾಡಿ ಗೋಹತ್ಯೆ ಕಾಯ್ದೆ ಕುರಿತು ಚರ್ಚೆ ನಡೆಸಿದ ಸಚಿವ ಪ್ರಭು ಚವ್ಹಾಣ್ https://kannada.thebengalurulive.com/minister-prabhu-chauhan-meets-uttar-pradesh-chief-minister-yogi-adityanath/