Home Uncategorized Karnataka Assembly Session Live: ಬೆಳಗಾವಿ ಗಡಿ ವಿಚಾರದ ಚರ್ಚೆಗೆ ಇಂದು ಕರ್ನಾಟಕ ಸರ್ಕಾರದಿಂದ ಉತ್ತರ

Karnataka Assembly Session Live: ಬೆಳಗಾವಿ ಗಡಿ ವಿಚಾರದ ಚರ್ಚೆಗೆ ಇಂದು ಕರ್ನಾಟಕ ಸರ್ಕಾರದಿಂದ ಉತ್ತರ

11
0

Karnataka Winter Session 2022 Live News Updates: ಬೆಳಗಾವಿ: ಇಂದು ಬೆಳಗಾವಿ ಚಳಿಗಾಲದ ಅಧಿವೇಶನ(Belagavi Winter Session) 3ನೇ ದಿನಕ್ಕೆ ಕಾಲಿಟ್ಟಿದೆ. ಅಧಿವೇಶನದಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಅಧಿವೇಶನದಲ್ಲಿ ವಿಧಾನ ಪರಿಷತ್​ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಲಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜನೆ ಹಿನ್ನೆಲೆ ಬೆಳಗಾವಿಯ ಸುವರ್ಣಸೌಧದಲ್ಲಿ ಸಂಜೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ವಿಧಾನಸಭೆಯಲ್ಲಿ ನಿಯಮ 69ರಡಿ ಗಡಿ ವಿವಾದ ಕುರಿತು ಚರ್ಚೆ ನಡೆಯಲಿದೆ. ಸದನದಲ್ಲಿಂದು ಗಡಿ ವಿಚಾರದಲ್ಲಿ ನಿರ್ಣಯ ಅಂಗೀಕಾರವಾಗುವ ಸಾಧ್ಯತೆ ಇದೆ. ಗಡಿ ವಿಚಾರದಲ್ಲಿ ನಿರ್ಣಯವನ್ನು ಅಂಗೀಕರಿಸಿ ಕೇಂದ್ರಕ್ಕೆ ಕಳಿಸೋಣ ಎಂದು ನಿನ್ನೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವ ಬಗ್ಗೆ ಸಿಎಂ ಮಾಹಿತಿ ನೀಡಿದ್ದರು. ಸಿಎಂ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸಿದ್ದರು. ಗಡಿ ವಿಚಾರದ ಚರ್ಚೆಗೆ ಇಂದು ರಾಜ್ಯ ಸರ್ಕಾರ ಉತ್ತರ ನೀಡಲಿದೆ.

LEAVE A REPLY

Please enter your comment!
Please enter your name here