
Karnataka Bandh on September 29 | All the schools and colleges of Bangalore city will be declared holiday tomorrow
ಬೆಂಗಳೂರು:
ತಮಿಳುನಾಡಿಗೆ ಹರಿಬಿಡುತ್ತಿರುವ ಕಾವೇರಿ ನೀರಿನ ಬಗ್ಗೆ ನಾಳೆ (ಸೆಪ್ಟೆಂಬರ್ 29) ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ನಾಳೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಸೇವೆಗಳು ಸಿಗುವುದು ಅನುಮಾನವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.