ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳ ಬೆಳಗಾವಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 7ರಿಂದ 10 ದಿನಗಳ ಕಾಲ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಅಕ್ಟೋಬರ್ 15ರ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಮುಂದಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಕ್ಟೋಬರ್ 27ರಂದು ಕರ್ನಾಟಕ ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಅಧಿವೇಶನ ಕರೆಯುವ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಪತ್ರದಲ್ಲಿ ಅಧಿವೇಶನದ ಆರಂಭದ ದಿನಾಂಕ, ಸ್ಥಳ ಹಾಗೂ 10 ದಿನಗಳ ಅವಧಿಯನ್ನು ಉಲ್ಲೇಖಿಸಲಾಗಿದೆ. ಇದು ಅಧಿಸೂಚನೆ ಹೊರಡಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಮನವಿಯಾಗಿದ್ದು, ಉಭಯ ಸದನಗಳನ್ನು ಕರೆಯುವ ಅಧಿಕೃತ ಅಧಿಸೂಚನೆಯಲ್ಲ.
