Home ಬೆಂಗಳೂರು ನಗರ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದೂರು

ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ದೂರು

44
0
Karnataka BJP complains against Congress Leader DK Shivakumar
bengaluru

ಬೆಂಗಳೂರು:

ಜನರ ನಡುವೆ ದ್ವೇಷ ಉಂಟು ಮಾಡುವ, ಸಮಾಜದಲ್ಲಿ ಶಾಂತಿ ಕದಡುವಂತಹ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅಪರಾಧಕ್ಕಾಗಿ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.

ಬಿಜೆಪಿ ಕಾನೂನು ಪ್ರಕೋಷ್ಠದ ವತಿಯಿಂದ ಕರ್ನಾಟಕ ಡಿಜಿಪಿ ಮತ್ತು ಐಜಿಪಿ ರವರಿಗೆ ಇಂದು ದೂರು ಸಲ್ಲಿಸಲಾಯಿತು, ಶಿವಕುಮಾರ್ ರವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಂಡು ಇನ್ನು ಮುಂದೆ ಅವರು ಈ ರೀತಿ ಸುಳ್ಳು ಸುದ್ದಿಗಳನ್ನು ಪೋಸ್ಟ್ ಮಾಡದಂತೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ.

ಹಿಂಸೆ, ದ್ವೇಷ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವ ಮಾದರಿಯ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠ ಆಕ್ಷೇಪಿಸಿದೆ.

bengaluru

ದೂರು ನೀಡುವ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕೋಶಾಧ್ಯಕ್ಷರಾದ ಸುಬ್ಬನರಸಿಂಹ, ಬೆಂಗಳೂರು ದಕ್ಷಿಣ ಜಿಲ್ಲೆ ಕಾನೂನು ಪ್ರಕೋಷ್ಠದ ಸಂಚಾಲಕರಾದ ಯಶವಂತ್ ಎಂ ಮತ್ತು ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ವಿನೋದ್ ಕೃಷ್ಣಮೂರ್ತಿ ಅವರು ಉಪಸ್ಥಿತರಿದ್ದರು.

bengaluru

LEAVE A REPLY

Please enter your comment!
Please enter your name here