Home ಬೆಂಗಳೂರು ನಗರ ಎಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಎಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

10
0
Karnataka: BJP State President Nalin Kumar Kateel met HD Kumaraswamy and inquired about his health
Karnataka: BJP State President Nalin Kumar Kateel met HD Kumaraswamy and inquired about his health
Advertisement
bengaluru

ಬೆಂಗಳೂರು:

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಲಘು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಕಟೀಲ್ ಅವರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.

“ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಅಶ್ವಥ್ ನಾರಾಯಣ ಅವರು ಉಪಸ್ಥಿತರಿದ್ದರು,” ಎಂದು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ತಮ್ಮ ಭೇಟಿಯ ಸಮಯದಲ್ಲಿ ಮಾಜಿ ಸಿಎಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here