Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ: ನಳಿನ್‍ಕುಮಾರ್ ಕಟೀಲ್
  • ರಾಜಕೀಯ
  • ಬೆಂಗಳೂರು ನಗರ

ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ: ನಳಿನ್‍ಕುಮಾರ್ ಕಟೀಲ್

Vighnesh Pawar June 19, 2023 5:10 PM 1 minute read
Karnataka BJP's Moral support for KASSIA's protest against increased Power Tarrif: Nalin Kumar Kateel

Karnataka BJP's Moral support for KASSIA's protest against increased Power Tarrif: Nalin Kumar Kateel

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ (ಕಾಸಿಯಾ) ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಬಿಲ್‍ನಲ್ಲಿ ವಂಚನೆ ಮಾಡಲಾಗುತ್ತಿದೆ. ಈಗಾಗಲೇ ರಾಜ್ಯದ ಕೈಗಾರಿಕಾ ವಾಣಿಜ್ಯ ಮಂಡಳಿ ಕಾಸಿಯಾವು ಹೋರಾಟ, ಬಂದ್‍ಗೆ ಕರೆ ಕೊಟ್ಟಿದೆ. ಕಳೆದ 15- 20 ದಿನಗಳಿಂದ ರಾಜ್ಯದ ಜನರ ಬಾಯಲ್ಲಿ ವಿದ್ಯುತ್ ಬಿಲ್ ಕುರಿತು ಚರ್ಚೆಗಳು ನಡೆಯುತ್ತಿವೆ. ಸಾಮಾನ್ಯ ಜನರಿಗೂ 2 ಸಾವಿರದ ಬದಲು 6ರಿಂದ 8 ಸಾವಿರದ ಬಿಲ್ ಬರುತ್ತಿದೆ. 20 ಸಾವಿರ ಬಿಲ್ ಬರುವ ಉದ್ಯಮಿಗೆ 1 ಲಕ್ಷದ ಬಿಲ್ ಬಂದಿದೆ. ಕೆಲವೆಡೆ 7ರಿಂದ 8 ಲಕ್ಷದ ಬಿಲ್ ವಿಧಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ಹಠಮಾರಿ ಧೋರಣೆಯನ್ನು ಕೈಬಿಡಬೇಕು. ಈ ರಾಜ್ಯದಲ್ಲಿ ಉದ್ಯಮಿಗಳಿಗೆ ಅವಕಾಶಗಳನ್ನು ಕೊಡಿ. ಅವರ ಸಮಸ್ಯೆಗಳನ್ನು ಆಲಿಸಿ ನ್ಯಾಯ ಕೊಡಬೇಕೆಂದು ಅವರು ಆಗ್ರಹಿಸಿದರು.

ಕಳೆದೊಂದು ತಿಂಗಳಿನಿಂದ ಜನಸಾಮಾನ್ಯರ ಮೇಲೆ ಸೇರಿದಂತೆ ಎಲ್ಲ ವರ್ಗದವರ ಮೇಲೆ ಬೇರೆಬೇರೆ ಆಘಾತಗಳನ್ನು ನೀಡುವ ಕೆಲಸವನ್ನು ರಾಜ್ಯ ಸರಕಾರ ಮಾಡಿದೆ. ಹಾಲಿನ ಬೆಂಬಲ ಬೆಲೆಯನ್ನು 1.50 ರೂ. ಕಡಿಮೆ ಮಾಡಿದ್ದಾರೆ. ಕರೆಂಟ್ ಬಿಲ್ ಹೆಚ್ಚಾಗಿದೆ. ಹೀಗಾಗಿ ರೈತರಿಗೂ, ಜನಸಾಮಾನ್ಯರಿಗೂ ಆಘಾತ ಉಂಟಾಗಿದೆ ಎಂದು ವಿವರಿಸಿದರು.

ಬಿಜೆಪಿ ಸರಕಾರ ಇದ್ದಾಗ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ 75 ಯೂನಿಟ್ ಉಚಿತ ವಿದ್ಯುತ್ ಕೊಡಲಾಗಿತ್ತು. ಆದರೆ, ದರ ಏರಿಸಿರಲಿಲ್ಲ; ಕರ್ನಾಟಕದಲ್ಲಿ ಬಿಜೆಪಿ ಸರಕಾರ ಇದ್ದಾಗ ವಿದ್ಯುತ್ ಸರಬರಾಜಿನ ಸಮಸ್ಯೆ ಇರಲಿಲ್ಲ. ಈಗ ವಿದ್ಯುತ್ ಪೂರೈಕೆಯೂ ಸರಿಯಾಗಿಲ್ಲ. ಒಂದೆಡೆ ಮಳೆ ಇಲ್ಲ. ಇನ್ನೊಂದೆಡೆ ಗದ್ದೆ, ತೋಟಕ್ಕೆ ನೀರು ಹಾಯಿಸಲು ಕರೆಂಟಿಲ್ಲ ಎಂಬ ಸ್ಥಿತಿ ಬಂದಿದೆ ಎಂದು ಟೀಕಿಸಿದರು.

ನಾವು ಅನುಷ್ಠಾನಕ್ಕೆ ತಂದ ಮತಾಂತರ ನಿಷೇಧ ಕಾಯ್ದೆ, ಗೋಹತ್ಯಾ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುವ ಕಾಂಗ್ರೆಸ್ ಸರಕಾರಕ್ಕೆ ವಿದ್ಯುತ್ ದರ ಏರಿಕೆ ಹಿಂದಕ್ಕೆ ಪಡೆಯಲಾಗುವುದಿಲ್ಲವೇ ಎಂದು ಅವರು ಪ್ರಶ್ನೆಯನ್ನು ಮುಂದಿಟ್ಟರು. ಪಠ್ಯದಲ್ಲಿ ಪಾಠ ಬದಲಾವಣೆ ಮಾಡುವ ಸಿದ್ರಾಮಣ್ಣನ ಸರಕಾರಕ್ಕೆ ಇದನ್ನು ಮಾಡಲಾಗುವುದಿಲ್ಲವೇ? ಎಂದು ಕೇಳಿದರು.

ಅಕ್ಕಿ ವಿಚಾರದಲ್ಲೂ ಸಿದ್ರಾಮಣ್ಣ, ಡಿ.ಕೆ.ಶಿವಕುಮಾರ್ 10 ಕೆಜಿ ಕೊಡುವುದಾಗಿ ಸುಳ್ಳು ಹೇಳಿದ್ದಾರೆ. ಅದರಲ್ಲಿ 5 ಕೆಜಿ ಕೇಂದ್ರದ್ದು ಎಂದು ಜನರಿಗೂ ಗೊತ್ತಾಗಲಿ. ಕಾಂಗ್ರೆಸ್ಸಿಗರು ಪ್ರತಿಭಟನೆ ಜೋರಾಗಿ ಮಾಡಿದರೆ ವಿಷಯ ಜನರಿಗೂ ತಿಳಿಯುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದರು.

ಹಿಂದೆ ಸಿದ್ರಾಮಣ್ಣನ ಸರಕಾರ ಇದ್ದಾಗ ಕೇಂದ್ರದಿಂದ ಅಕ್ಕಿ ಪಡೆದು ಅದನ್ನು ತಮ್ಮ ಫೋಟೊ ಹಾಕಿ ಜನರಿಗೆ ನೀಡುತ್ತಿದ್ದರು. ಕೋವಿಡ್ ಅವಧಿಯಲ್ಲಿ ನಾವು ಅಕ್ಕಿ ನೀಡಿದ್ದೇವೆ. ಸಿದ್ರಾಮಣ್ಣ ಮತ್ತು ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುತ್ತದೆ ಎಂದಿದ್ದರು. ಅದನ್ನು ಕೊಡಲಿ ಎಂದು ಸವಾಲೆಸೆದರು.

ಈ ಸರಕಾರ ಡಿಸೆಂಬರ್‍ನಲ್ಲಿ ಬಿದ್ದು ಹೋಗಲಿದೆ ಎಂದು ನಳಿನ್‍ಕುಮಾರ್ ಅವರು ತಿಳಿಸಿದರು. ಅಧಿವೇಶನ ಆರಂಭವಾಗುವ ವೇಳೆಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ ಎಂದ ಅವರು, ಸರಕಾರ ನಡೆಸಲು ಮುಖ್ಯಮಂತ್ರಿ ಬೇಕಿತ್ತು. ಮುಖ್ಯಮಂತ್ರಿ ಆಯ್ಕೆಗೆ ಅವರು 4 ದಿನ ತೆಗೆದುಕೊಂಡರಲ್ಲವೇ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಮುಂದಿನ ಹೋರಾಟದ ರೂಪುರೇಷೆಗಳನ್ನು ಇಂದಿನ ಸಭೆಯಲ್ಲಿ ನಿರ್ಧರಿಸಲಾಗುತ್ತದೆ. ಕಾಂಗ್ರೆಸ್ಸಿನ ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ನಮ್ಮ ಸಹಕಾರ ಇದೆ ಎಂದ ಅವರು, 22ರಿಂದ ಪಕ್ಷದ ನಾಯಕರ ಜಿಲ್ಲಾ ಪ್ರವಾಸ ಆರಂಭವಾಗಲಿದೆ. ಅದರಲ್ಲಿ ನಮ್ಮ ಕೇಂದ್ರ ಸರಕಾರದ 9 ವರ್ಷಗಳ ಅವಧಿಯ ಅಭಿವೃದ್ಧಿ, ಸಾಧನೆಗಳನ್ನು ತಿಳಿಸುತ್ತೇವೆ. ಪತ್ರಿಕಾಗೋಷ್ಠಿ, ಸಂವಾದ, ಪ್ರಬುದ್ಧರ ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ನುಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್ ಮತ್ತು ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮತ್ತಿತರರು ಇದ್ದರು.

About the Author

Vighnesh Pawar

Subscriber

View All Posts

Post navigation

Previous: ಮೃತರ ಕುಟುಂಬದ ಕಣ್ಣೀರು ಒರೆಸುವುದರಲ್ಲೂ, ಪರಿಹಾರ ನೀಡುವುದರಲ್ಲೂ ಬಿಜೆಪಿ ಪರಿವಾರ ತಾರತಮ್ಯವನ್ನು ಆಚರಿಸಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
Next: ರಾಜ್ಯದ ಜವಾಬ್ದಾರಿ ಇದ್ದರೂ ಗ್ರಾಮೀಣ ಕ್ಷೇತ್ರವನ್ನು ಕಡೆಗಣಿಸಲಾರೆ – ಲಕ್ಷ್ಮೀ ಹೆಬ್ಬಾಳಕರ್

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.