ನವದೆಹಲಿ:
ಮಂಗಳವಾರ ಸಂಜೆಯೊಳಗೆ ತಮ್ಮ ನೇತೃತ್ವದ ಸಚಿವ ಸಂಪುಟ ಸೇರುವವರ ಪಟ್ಟಿ ಬಿಡುಗಡೆ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ವರಿಷ್ಠರ ಭೇಟಿಗೆ ದೆಹಲಿಗೆ ಆಗಮಿಸಿದ್ದ ಬೊಮ್ಮಾಯಿ ನವದೆಹಲಿಯಲ್ಲಿ ವರಿಷ್ಠರ ಭೇಟಿ ನಡೆಸಿ ಸಂಪುಟ ಸೇರುವವರ ಮೂರ್ನಾಲ್ಕು ಪಟ್ಟಿಯನ್ನು ನೀಡಿ, ಸಂಪುಟ ರಚನೆಗೆ ವರಿಷ್ಠರಿಂದ ಒಪ್ಪಿಗೆಯನ್ನೂ ಪಡೆದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆಯೊಳಗೆ ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.ಸಂಪುಟ ರಚನೆ ಕುರಿತು ಚರ್ಚೆ ಮಾಡಿದ್ದೇವೆ.ಎಷ್ಟು ಜನ ಮಂತ್ರಿಗಳಾಗಬೇಕು? ಎಷ್ಟು ಜನರು ಸಂಪುಟದಲ್ಲಿರಬೇಕು ಎಂಬುದನ್ನು ಹೈಕಮಾಂಡ್ ತಿಳಿಸಲಿದೆ.ನಾವು ಬೇರೆಬೇರೆ ವಿಂಗಡನೆ ಮಾಡಿರುವ ಎರಡ್ಮೂರು ಪಟ್ಟಿಗಳನ್ನು ಕೊಟ್ಟಿದ್ದೇನೆ.ನಮ್ಮ ಪಕ್ಷದಲ್ಲಿ ಯಾರೂ ವಲಸಿಗರಲ್ಲ, ಎಲ್ಲರೂ ಬಿಜೆಪಿಯವರೇ ಆಗಿದ್ದಾರೆ.ನಾವು ಹೇಳಿದ್ದನ್ನು ಕೇಳಿಸಿಕೊಂಡು ನಾಳೆ ಪಟ್ಟಿ ಬಿಡುಗಡೆ ಮಾಡುತ್ತಾರೆ.ಡಿಸಿಎಂ ಹುದ್ದೆ ಸೃಷ್ಟಿ ಕುರಿತು ವರಿಷ್ಠರನ್ನು ತೀರ್ಮಾನ ಮಾಡುತ್ತದೆ.ಪ್ರಾದೇಶಿಕತೆ, ಸಮುದಾಯ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಸಂಪುಟ ಪಟ್ಟಿ ಬಿಡುಗಡೆ ಮಾಡುತ್ತಾರೆ.ನಾಳೆ ರಾತ್ರಿಯೊಳಗೆ ಸಂಪುಟ ಸೇರುವವರ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಡುಗಡೆ ಮಾಡುತ್ತಾರೆ.ನಾಳೆ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಪ್ರಮಾಣ ವಚನದ ಕುರಿತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತಾರೆ ಎಂದರು.