Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka Budet 2023: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ ಎಂದ ಹೆಚ್.ಡಿ.ಕುಮಾರಸ್ವಾಮಿ
  • ಬೆಂಗಳೂರು ನಗರ

Karnataka Budet 2023: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್ ಎಂದ ಹೆಚ್.ಡಿ.ಕುಮಾರಸ್ವಾಮಿ

Vighnesh Pawar July 7, 2023 4:45 PM 1 minute read
Karnataka Budet 2023: s HD Kumaraswamyays this is a cut and paste budget

Karnataka Budet 2023: s HD Kumaraswamyays this is a cut and paste budget

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

85,000 ಕೋಟಿ ಸಾಲ ಎತ್ತಲು ಬಜೆಟ್ ಗಾತ್ರ ಹಿಗ್ಗಿಸಿದ ಸರಕಾರ

ಬಿಜೆಪಿ, ಮೋದಿ ಸರಕಾರಗಳ ನಿಂದನಾ ಬಜೆಟ್

ಯೋಜನೆಗಳನ್ನು ಎಟಿಎಮ್ ಮಾಡಿಕೊಳುವ ಮುಂಗಡ ಪತ್ರ

ಬೆಂಗಳೂರು:

ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್. ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ, ಹಿಂದಿನ ಬಿಜೆಪಿ ಸರಕಾರವನ್ನು ನಿಂದಿಸಲು ಮೀಸಲಾದ ಬಜೆಟ್. ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್. ಹಾಗೂ ಅನೇಕ ಎಟಿಎಮ್ ಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್. ರಾಜ್ಯ ಮುಂಗಡ ಪತ್ರದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಿದು.

ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಲೆಖಾನುದಾನ ಪಡೆದಿದ್ದರು. ಅದರ ಮುಂದುವರೆದ ಭಾಗವೇ ಈ ಬಜೆಟ್. ನಮ್ಮ ಹಣಕಾಸು ಸಚಿವರು ದಾಖಲೆ ಸ್ಥಾಪನೆ ಮಾಡಿಕೊಳ್ಳಲು ಮಂಡಿಸಿದ ದಾಖಲೆಯ ಬಜೆಟ್ ಅಷ್ಟೇ ಇದು ಎಂದು ಅವರು ಕಟುವಾಗಿ ಟೀಕಿಸಿದರು.

ಇದನ್ನು ರಾಜ್ಯದ ಬಜೆಟ್ ಪುಸ್ತಕ ಅನ್ನುವುದಕ್ಕಿಂತ ಬಿಜೆಪಿಯ ನಿಂದನಾ ಪುಸ್ತಕ ಎಂದರೆ ಸರಿಯಾದೀತು. ಕೇಂದ್ರ ಸರ್ಕಾರ ಮತ್ತು ಹಿಂದಿನ ಸರಕಾರ ಬಿಜೆಪಿಯ ಆಡಳಿತ ಬಂದ ನಂತರ ಆರ್ಥಿಕ ಶಿಸ್ತನ್ನ ಉಲ್ಲಂಘಿಸಿದ್ದಾರೆ, ಸ್ವೆಚ್ಚಾಚಾರದಿಂದ ಆರ್ಥಿಕ ಶಿಸ್ತು ಹಾಳು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ತಮ್ಮ ದೂರದೃಷ್ಟಿ, ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಟ್ಟು ಹೇಳುವ ಬದಲು ಕೇವಲ ಅನ್ಯರನ್ನು ತೆಗಳಲು ಬಜೆಟ್ ಅನ್ನು ಬಳಕೆ ಮಾಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ ಎಂದು ಬಹಳಷ್ಟು ಕಡೆ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದರು.

ಬಸವರಾಜ ಬೊಮ್ಮಾಯಿಯವರ ಕಾಲದಲ್ಲಿ ನೀರಾವರಿ ಇಲಾಖೆಗೆ 1 ಲಕ್ಷ ಕೋಟಿ ಯೋಜನೆಗಳಿಗೆ ಅನುಮತಿ ಕೊಟ್ಟಿದ್ದಾರೆ. ಅದಕ್ಕೆ ಈಗ 40 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಸೇರ್ಪಡೆ ಆಗಿದೆ. 1 ಲಕ್ಷ 75 ಸಾವಿರ ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಹಣ ಇಡದೆ ಘೋಷಿಸಿದ್ದಾರೆ. 2013 -18 ರಿಂದ 15 ಲಕ್ಷ ಮನೆ ಕಟ್ಟಿದ್ದೀವಿ ಎಂದು ಹೇಳಿದ್ದಾರೆ. ಎಲ್ಲಿ ಕಟ್ಟಿದ್ದಾರೆ, ಇನ್ನು 12 ಲಕ್ಷ ಮನೆ ಕಟ್ಟಲು 17,815 ಕೋಟಿ ರೂಪಾಯಿ ಬೇಕು ಎಂದು ಹೇಳಿದ್ದಾರೆ. ಅದನ್ನು ಎಲ್ಲಿಂದ ತರುತ್ತಾರೆ. ಈಗ ನೋಡಿದರೆ ಆರ್ಥಿಕ ಶಿಸ್ತನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಅಗತ್ಯ ಇತ್ತೆ ಎಂದು ಅವರು ಪ್ರಶ್ನಿಸಿದರು.

ಈ ಬಾರಿ 3 ಲಕ್ಷ 28 ಸಾವಿರ ಕೋಟಿ ಬಜೆಟ್ ನಲ್ಲಿ ಎರಡೂವರೆ ಲಕ್ಷ ಕೋಟಿ ರೆವಿನ್ಯೂ ಎಕ್ಸ್ ಪೆಂಡಿಚರ್, 27 ಸಾವಿರ ಕೋಟಿ ಸಾಲ ಮರುಪಾವತಿಗೆ ಇಟ್ಟುಕೊಂಡಿದ್ದಾರೆ. ಅದಾದ ಮೇಲೆ 85 ಸಾವಿರ ಕೋಟಿ ಸಾಲ ಎತ್ತುತ್ತಾರೆ. ಆ ಸಾಲಕ್ಕೆ ತಲೆ ಕೊಡುವುದು ಯಾರು? ಇವರು ನೋಡಿದರೆ ಹಿಂದಿನ ಸರಕಾರ ಆರ್ಥಿಕ ಶಿಸ್ತನ್ನ ಹಾಳು ಮಾಡಿದೆ ಬಜೆಟ್ ಉದ್ದಕ್ಕೂ ಹೇಳಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಜ್ಯದಲ್ಲಿ ಹಣಕ್ಕೆ ಕೊರತೆ ಇಲ್ಲ. ರಾಜ್ಯದ ತೆರಿಗೆ ಇಲಾಖೆಗಳ ಯಾವುದೇ ಶ್ರಮ ಇಲ್ಲದೆ ಜನರು ರಾಜ್ಯದ ಜನತೆ ಖಜಾನೆ ತುಂಬಿದ್ದಾರೆ. ಅದಕ್ಕಾಗಿ ಜನತೆಯನ್ನು ಅಭಿನಂದಿಸುತ್ತೇನೆ. ಕೋವಿಡ್ ಸಮಸ್ಯೆಯಲ್ಲೂ, ಜನ ಹಣ ತುಂಬಿಸಿಕೊಟ್ಟಿದ್ದಾರೆ. ಒಂದೇ ವರ್ಷಕ್ಕೆ ಜನರ ಮೇಲೆ 85 ಸಾವಿರ ಕೋಟಿ ಸಾಲ ಹೊರೆ ಹೊರೆಸುತ್ತಿದ್ದಾರೆ. ಇಷ್ಟೋಂದು ಸಾಲ ಏಕೆ ಮಾಡ್ತೀದೀರಿ. ಅದಕ್ಕೆ ಕಾರಣ ಕೊಡಿ ಎಂದು ಅವರು ಒತ್ತಾಯ ಮಾಡಿದರು.

ಈ ಬಜೆಟ್ಟಿನಲ್ಲಿ ದುಡಿಯುವ ಜನರ ಕೈಗೆ ಸ್ವಾವಲಂಭಿಯಾಗಲು, ಅವರು ಬದಕಲು ದೀರ್ಘಕಾಲೀನ ಯೋಜನೆ ಏನು? ಈ ಪ್ರಶ್ನೆ ಹಾಕಿಕೊಂಡರೆ ಉತ್ತರ ಶೂನ್ಯ ಎಂದ ಅವರು; ಇವರ ಯಾವ ಗ್ಯಾರಂಟಿಗೂ ನನ್ನ ತಕರಾರಿಲ್ಲ, ಇನ್ನೂ ಎರಡು ಜ್ಯೋತಿ ಕೊಡಿ. ನಮದ್ದೇನು ತಕರಾರಿಲ್ಲ. ವರ್ಷಕ್ಕೆ 50 ರಿಂದ 60 ಸಾವಿರ ವೆಚ್ಚಾಗಲಿದೆ. ಇದೊಂದೇ ಈ ಬಜೆಟ್ ನಲ್ಲಿ ಇರೊದು. ಆದರೆ ಯಾವುದಕ್ಕೂ ಈ ಬಜೆಟ್ ನಲ್ಲಿ ಹಣ ಇಟ್ಟಿಲ್ಲ. ಇದು ಕೇವಲ ಕೇಂದ್ರ ಸರ್ಕಾರ- ಹಿಂದಿನ ಸರ್ಕಾರವನ್ನ ದೂಷಣೆ ಮಾಡುವ ಬಜೆಟ್ ಅಷ್ಟೇ. ಇದರಲ್ಲಿ ಏನೂ ಇಲ್ಲ ಎಂದು ದೂರಿದರು.

ನೀರಾವರಿ, ಕೃಷಿಗೆ, ಜನರ ಬದುಕು ಕಟ್ಟಲು, ಜನರು ಸ್ವಾಭಿಮಾನಿಗಳಾಗಿ, ಸ್ವಾವಲಂಬಿಗಳಾಗಿ ಜೀವನ ಮಾಡಲು ಈ ಬಜೆಟ್ ಕೊಟ್ಟ ದೂರದೃಷ್ಟಿ ಏನು? ಇದು ನನ್ನ ಪ್ರಶ್ನೆಯಾಗಿದೆ. ಆದಾಯ ಹೆಚ್ಚಿಸಲು ಅಬಕಾರಿ ಇಲಾಖೆ ಒಂದನ್ನೇ ನೆಚ್ಚಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಬಜೆಟ್ ನಲ್ಲಿ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಅನ್ನಭಾಗ್ಯ ಅಕ್ಕಿಗೆ ಹಣ ಕೊಡಲು ಹೊರಟ್ಟಿದ್ದಾರಲ್ಲ ಇವರು, ಆ ದುಡ್ಡು ಇದಕ್ಕೆ ಹೋಗುತ್ತೆ. ಅನ್ನಭಾಗ್ಯಕ್ಕೆ ಕೊಡುವ ಹಣವನ್ನು ಅಬಕಾರಿ ಮೂಲಕ ಸುಲಿಗೆ ಮಾಡಿಕೊಳ್ಳಲು ಈ ಬಜೆಟ್ ಹುನ್ನಾರ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಆರೋಪ ಮಾಡಿದರು.

ಯಾರೋ ಒಬ್ಬರ ಬ್ಯಾಂಕ್ ಖಾತೆಗೆ ಹಣ ಹೋಗುತ್ತದೆ. ಆತ ಆ ಹಣವನ್ನು ಮನೆಗೆ ತೆಗೆದುಕೊಂಡು ಹೋಗ್ತಾನೊ.. ಇನ್ನೆಲ್ಲಿ ತಗೊಂಡು ಹೋಗ್ತಾನೊ ಗೊತ್ತಿಲ್ಲ. ಒಂದು ಕಡೆ ಇವರೇ ಬೆಳೆಗೆ 7 ಗಂಟೆಗೆ ಮದ್ಯದ ಅಂಗಡಿ ತೆಗೆಸುತ್ತಾರೆ. ಬೆಳಗ್ಗೆ 7 ಗಂಟೆಗೆ ಒಂದು ರೇಟು, ರಾತ್ರಿ 10 ಗಂಟೆಗೆ ಒಂದು ರೇಟು ಇಟ್ಟಿದ್ದಾರಲ್ಲ?? ಹೀಗೆ ಕಿತ್ತುಕೊಳ್ಳುವ ಹಣ ಎಲ್ಲಿಗೆ ಹೋಗುತ್ತದೆ. ಒಂದು ಕೈಲಿ ಕೊಟ್ಟು ಇನ್ನೊಂದು ಕೈಲಿ ಕಿತ್ತುಕೊಳ್ಳುವುದಾ ಆರ್ಥಿಕ ಶಿಸ್ತು ಎಂದರೆ ಇದೇನಾ ಎಂದು ಅವರು ಪ್ರಶ್ನಿಸಿದರು.

ಒಂದು ಪತ್ರಿಕೆಯಲ್ಲಿ ಒಂದು ವರದಿ ಓದಿದೆ. ಆನ್ ಲೈನ್ ಗೇಮ್ ನಿಂದ ಒಬ್ಬ 65 ಲಕ್ಷ ರೂಪಾಯಿ ಕಳೆದುಕೊಂಡು ಅಷ್ಟೂ ಹಣವನ್ನು ಸಾಲ ಮಾಡಿಕೊಂಡಿದ್ದಾರೆ. ಈ ಅನ್ನಭಾಗ್ಯ ಹಣ ಇದಕ್ಕೆ ಹೋಗುತ್ತೊ ಏನೋ? ಯೋಜನೆ ಮಾಡುವುದು ದೊಡ್ಡದಲ್ಲ, ಅದನ್ನು ಹೇಗೆ ಕಾರ್ಯಗತ ಮಾಡುತ್ತೇವೆ ಎನ್ನುವುದು ಬಹಳ ಮುಖ್ಯ. ಅದಕ್ಕೊಂದು ನಿರ್ದಿಷ್ಟ ದೂರದೃಷ್ಟಿ ಬೇಡವೇ? ಎಂದು ಅವರು ತಿಳಿಸಿದರು.

ಈ ದಾಖಲೆಯ ಬಜೆಟ್ ಮಂಡನೆ ಮಾಡಿದವರ ಎಲ್ಲಾ ಬಜೆಟ್ ಗಳನ್ನು ಅಧ್ಯಯನ ಮಾಡುತ್ತಿದ್ದೇನೆ. 1995ರಿಂದ ಇವರು ಮಂಡಿಸಿದ ಎಲ್ಲಾ 13 ಬಜೆಟ್ ಗಳನ್ನು ಅಧ್ಯಯನ ಮಾಡುತ್ತಿದ್ದೇನೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕೇಂದ್ರ ಸರ್ಕಾರ- ರಾಜ್ಯ ಸರ್ಕಾರಗಳ ನಡುವೆ ಸುಂದರ ಬಾಂಧವ್ಯ ಇರಬೇಕು. ಸಂಪನ್ಮೂಲ, ಅನುದಾನ, ಅಭಿವೃದ್ಧಿ ಇತ್ಯಾದಿ ವಿಷಯಗಳಲ್ಲಿ ತಿಕ್ಕಾಟ ಮಾಡಿಕೊಳ್ಳುವುದು ಒಳ್ಳೆಯದಲ್ಲ. ಪ್ರತಿಬಾರಿ ಅವರನ್ನು ದೂಷಣೆ ಮಾಡಿದರೆ ರಾಜ್ಯಕ್ಕೆ ನಷ್ಟ ತಪ್ಪಿದ್ದಲ್ಲ. ಕೇಂದ್ರವನ್ನು ಇವರು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದರಿಂದ ನಮಗೆ ಲಾಭ ಜಾಸ್ತಿ ಎಂದು ಸರಕಾರಕ್ಕೆ ಕಿವಿಮಾತು ಹೇಳಿದರು.

ಅಂಥ ಸಾಮರಸ್ಯದ ಸಂದೇಶ ಸಾರದ ಇವರು, ಕರ್ನಾಟಕದ ಬಜೆಟ್ ಇಡೀ ದೇಶಕ್ಕೆ ಸಂದೇಶ ಕೊಡುವ ಬಜೆಟ್ ಅಂತ ಕೊಚ್ಚಿಕೊಳ್ಳುತ್ತಿದ್ದಾರೆ. ಬಜೆಟ್ ಬುಕ್ ಜತೆ ಕೇಂದ್ರದ ಜತೆ ಜಗಳಕ್ಕೆ ನಿಲ್ಲುವುದಾ ಸಂದೇಶ? ಬಜೆಟ್ ಅಂದರೆ ಅದಕ್ಕೊಂದು ಘನತೆ ಇರುತ್ತದೆ. ಅದನ್ನು ಇವರು ಹಾಳು ಮಾಡಿದ್ದಾರೆ ಎಂದು ಅವರು ಕಿಡಿಕಾರಿದರು.

ಬಸವರಾಜ ಬೊಮ್ಮಾಯಿ 77 ಸಾವಿರ ಕೋಟಿ ಸಾಲ ಮಾಡಿದ್ರು, ಇವರು 85 ಸಾವಿರ ಕೋಟಿಗೆ ತೆಗೆದುಕೊಂಡು ಹೋಗಿದ್ದಾರೆ. ಹಿಂದಿನ ಬಜೆಟ್ ನ ಯೋಜನೆ ಎಲ್ಲ ಲೆಕ್ಕಾಚಾರ ತೆಗೆದ್ರು 59 ಕೋಟಿ ವ್ಯತ್ಯಾಸ ಆಗಿರಬಹುದು ಅಷ್ಟೇ. ಆರೋಗ್ಯ, ಶಿಕ್ಷಣ ಕ್ಷೇತ್ರ ಪ್ರಮುಖವಾದುವು, ಅದಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕಿದೆ. ಅದನ್ನು ಜನರಿಗೆ ತಲುಪಲು ನಾವು ಎಡವುತ್ತಿದ್ದೇವೆ. ಮೂಲಭೂತವಾಗಿ ಜನರಿಗೆ ಏನು ಬೇಕು ಎನ್ನುವ ಬಗ್ಗೆ ಬಜೆಟ್ ಪೂರ್ಣವಾಗಿ ಎಡವಿದೆ ಎಂದು ಅವರು ತರಾಟೆಗೆ ತೆಗೆದುಕೊಂಡರು.

About the Author

Vighnesh Pawar

Subscriber

View All Posts

Post navigation

Previous: ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ-ಎದೆ ಎತ್ತಿ ಉತ್ತರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Next: Karnataka Budget 2023: ರಾಜಕೀಯ ಪ್ರೇರಿತ ರೀವರ್ಸ್ ಗೇರ್ ಬಜೆಟ್ : ಬಸವರಾಜ ಬೊಮ್ಮಾಯಿ

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

November 12, 2026 9:55 PM
ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

November 12, 2026 9:36 PM
ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM

ನೀವು ತಪ್ಪಿಸಿಕೊಂಡಿರಬಹುದು

ವಿದ್ಯಾಪೀಠ ಮುಖ್ಯರಸ್ತೆಯಲ್ಲಿ ಹೊಸದಾಗಿ ಡಾಂಬರು ಹಾಕಿದ ಭಾಗದ ಬಳಿ ರಸ್ತೆ ರೋಲರ್
  • ಬೆಂಗಳೂರು

ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ

The Bengaluru Live November 12, 2026 9:55 PM
ವಿಕಾಸ ಸೌಧದಲ್ಲಿ ರಾಜ್ಯ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ತಿನ ಸಭೆ
  • ಬೆಂಗಳೂರು

ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ

The Bengaluru Live November 12, 2026 9:47 PM
ಇನ್ವೆಸ್ಟ್ ಕರ್ನಾಟಕ 2027ರ ಪೂರ್ವಭಾವಿ ಕಾರ್ಯಕ್ರಮದ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಇತರರು
  • ಬೆಂಗಳೂರು

ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ

The Bengaluru Live November 12, 2026 9:36 PM
parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಿದ್ಯಾಪೀಠ ವಾರ್ಡ್‌ನಲ್ಲಿ ರಸ್ತೆ ಗುಂಡಿ ಮುಚ್ಚಿದ ಬೆಂಗಳೂರು ಪಶ್ಚಿಮ ನಗರ ಪಾಲಿಕೆ
  • ವಿಕಾಸ ಸೌಧದಲ್ಲಿ ಎಸ್‌ಸಿಎಸ್‌ಪಿ–ಟಿಎಸ್‌ಪಿ ಅಭಿವೃದ್ಧಿ ಪರಿಷತ್ ಸಭೆಗೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆ
  • ಇನ್ವೆಸ್ಟ್ ಕರ್ನಾಟಕ 2027: ಬೆಂಗಳೂರಿನಲ್ಲಿ ಏಪ್ರಿಲ್ 20ರಿಂದ 22ರವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ
  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
©Copyright 2025 The Bengaluru Live All rights reserved. | MoreNews by AF themes.