ಬೆಂಗಳೂರು :
ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮೂಲ ಮಂತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬಜೆಟ್ನಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬದ್ಧತೆ ತೋರಿರುವ ಜತೆಗೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನೀಲ ನಕ್ಷೆ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು ನೀಡಿರುವುದರ ಜತೆಗೆ 2,101 ಕೋಟಿ ರೂ. ಒದಗಿಸಿ ಬಿಜೆಪಿ ಅವಧಿಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಪುನರಾರಂಭಗೊಳಿಸಸಲು 60 ಕೋಟಿ ರೂ. , ಅರ್ಧಕ್ಕೆ ನಿಂತಿರುವ ಶಾದಿ ಮಹಲ್ ಹಾಗೂ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು 54 ಕೋಟಿ ರೂ. ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅದೇ ರೀತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೇಲ್ದರ್ಜೆಗೇರಿಸಲು 30 ಕೋಟಿ ರೂ., ಅರಿವು ಶಿಕ್ಷಣ ಸಾಲ ಕ್ಕೆ 73 ಕೋಟಿ ರೂ., ಅಲ್ಪಸಂಖ್ಯಾತ ಸಮುದಾಯದ ಕಾಲೋನಿಗಳ ಅಭಿವೃದ್ಧಿ ಗೆ 360 ಕೋಟಿ ರೂ.
ಅಲ್ಪಸಂಖ್ಯಾತ ಸಮುದಾಯದ ಶಾಲಾ ಕಾಲೇಜುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಕಲಿಸುವ ಭಾಷಾ ಲ್ಯಾಬ್ ಗಳಿಗೆ 5 ಕೋಟಿ ರೂ., ಸ್ವಾವಲಂಭಿ ಸಾರಥಿ ಯೋಜನೆಯಡಿ 3 ಲಕ್ಷ ರೂ. ನೆರವು, ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ವಖ್ಫ್ ಆಸ್ತಿ ಸಂರಕ್ಷಣೆಗೆ 40 ಕೋಟಿ ರೂ. ಒದಗಿಸಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ಬದ್ಧತೆ ಮೆರೆದಿದ್ದಾರೆ ಎಂದು ಹೇಳಿದ್ದಾರೆ.
ವಸತಿ ಇಲಾಖೆ ಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಧಕ್ಕೆ ನಿಂತಿರುವ 12 ಲಕ್ಷ ಮನೆಗಳ ಪೈಕಿ ಈ ವರ್ಷ 3 ಲಕ್ಷ ಮನೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು 2,450 ಕೋಟಿ ರೂ. ಒದಗಿಸಿರುವುದುu ಸ್ವಾಗತ ಎಂದು ತಿಳಿಸಿದ್ದಾರೆ.
ಒಟ್ಟಾರೆ ಬಜೆಟ್ ಆರ್ಥಿಕತೆ ಮತ್ತು ಅಭಿವೃದ್ಧಿ ಗೆ ವೇಗ ನೀಡಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಹೊಂದಿದೆ ಎಂದು ಹೇಳಿದ್ದಾರೆ.