Home ಬೆಂಗಳೂರು ನಗರ ಫೆಬ್ರವರಿ 07 ರಿಂದ ಆಯವ್ಯಯದ ಪೂರ್ವಭಾವಿ ಸಿದ್ಧತೆ: ಬೊಮ್ಮಾಯಿ

ಫೆಬ್ರವರಿ 07 ರಿಂದ ಆಯವ್ಯಯದ ಪೂರ್ವಭಾವಿ ಸಿದ್ಧತೆ: ಬೊಮ್ಮಾಯಿ

16
0
Karnataka Budget Preparation meetings from February 7: CM Bommai
bengaluru

ಬೆಂಗಳೂರು:

ಫೆಬ್ರವರಿ 07 ರಿಂದ ವ್ಯಯದ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

bengaluru

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.

ನಾಳೆ ದೆಹಲಿ ಪ್ರವಾಸ: ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತರರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

bengaluru

LEAVE A REPLY

Please enter your comment!
Please enter your name here