ನವದೆಹಲಿ:
ಸಚಿವ ಸಂಪುಟ ವಿಸ್ತರಣೆ ಸಂಬಂಧ ಇಂದು ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ 20 ನಿಮಿಷಗಳ ಕಾಲ ಚರ್ಚೆ ನಡೆಸಿ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ.
ಚರ್ಚೆಯ ವೇಳೆ ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದಾರೆ.ಜೊತೆಗೆ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.ಆದರೆ ಹೈಕಮಾಂಡ್ ವರಿಷ್ಟರು ಇನ್ನು ಯಾವುದೇ ಅಂತಿಮ ತೀರ್ಮಾನವನ್ನು ತಿಳಿಸಲಿಲ್ಲವೆಂದು ತಿಳಿದು ಬಂದಿದೆ.
ನಡ್ಡಾ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಿ ತಿಳಿಸುವುದಾಗಿ ಹೇಳಿದ್ದಾರೆ.ಸಂಪುಟ ವಿಸ್ತರ ಣೆಯೋ ಅಥವಾ ಪುನಾರಚ ನೆಯೋ ಎಂಬುದನ್ನು ಒಂದೆರಡು ದಿನಗಳಲ್ಲಿ ಹೈಕಮಾಂಡ್ ನಿರ್ಧರಿಸಲಿದೆ.ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ನನ್ನ ಅಭಿಪ್ರಾಯವನ್ನು ತಿಳಿಸಿದ್ದೇನೆ.ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದೇನೆ.ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿಲ್ಲ.ಈಗ ನೇರವಾಗಿ ಬೆಂಗ ಳೂರಿಗೆ ತೆರಳುತ್ತಿದ್ದೇನೆ ಎಂದು ಅವರು ಹೇಳಿದರು.
ಇಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆ.ಪಿ.ನಡ್ದಾ ರವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ, ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆಗಿದ್ದರು. @JPNadda pic.twitter.com/VLdDmMuEDH
— B.S. Yediyurappa (@BSYBJP) November 18, 2020
ಎರಡು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಅವರು ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ತುದಿಗಾಲಲ್ಲಿ ನಿಂತಿದ್ದರೂ ಪಕ್ಷದ ಹೈಕ ಮಾಂಡ್ ನಾಯಕರು ಮತ್ತೊಮ್ಮೆ ಯಡಿಯೂರಪ್ಪ ರನ್ನು ಬೆಂಗಳೂರಿಗೆ ವಾಪಸ್ ಕಳುಹಿಸಿದ್ದಾರೆ.ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ 100 ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.ಮುಂದಿನ ತಿಂಗಳು ರಾಜ್ಯಕ್ಕೂ ಆಗಮಿಸ ಲಿದ್ದಾರೆ.ಅಲ್ಲಿಯವರೆಗೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಮುಹೂರ್ತ ಕೂಡಿಬರುವ ಲಕ್ಷಣಗಳು ಕಂಡು ಬರುತ್ತಿಲ್ಲ.
ಬಹಳ ನಿರೀಕ್ಷೆಯಿಟ್ಟುಕೊಂಡು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿರೀಕ್ಷಿತ ಯಶಸ್ಸು ದೊರಕಿಲ್ಲ.ಸಂಪುಟ ವಿಸ್ತರಣೆ ಮಾಡು ವ ಉದ್ದೇಶ ಪಕ್ಷದ ಹೈಕಮಾಂಡ್ ಗೆ ಇದೆಯೋ ಅಥವಾ ನಾಯಕತ್ವದ ಬದಲಾವಣೆ ಉದ್ದೇಶವನ್ನು ಮನಸ್ಸಿನಲ್ಲಿಟ್ಟುಕೊಂಡು ಯಡಿಯೂರಪ್ಪನಿಗೆ ಬಿಜೆಪಿ ವರಿಷ್ಟರು ಅನುಮತಿ ನೀಡುತ್ತಿಲ್ಲವೋ ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.