Home ರಾಜಕೀಯ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲ ಚರ್ಚೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

55
0
Further discussion on Karnataka cabinet rejig to be held next week Bommai

ನವದೆಹಲಿ:

ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಸ್ಥೂಲವಾಗಿ ಚರ್ಚೆಯಾಗಿದೆ. ವರಿಷ್ಠರು ಎಲ್ಲಾ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

Also Read: Further discussion on Karnataka cabinet rejig to be held next week: Bommai

ಕಾರ್ಯಕಾರಿಣಿ ಸಭೆಗೆ ಬಂದ ಸಂದರ್ಭದಲ್ಲಿ ಮಿಕ್ಕ ವಿಚಾರಗಳನ್ನು ಮಾತನಾಡುವುದಾಗಿ ವರಿಷ್ಠರು ತಿಳಿಸಿದ್ದಾರೆ. ಇಲ್ಲಿಯ ವರಿಷ್ಠರು, ನಾಯಕರು, ಸಂಘಟನಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ಮಾಡಿ ತೀರ್ಮಾನ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.

ಬಜೆಟ್ ಯೋಜನೆಗಳ ಅನುಷ್ಠಾನಕ್ಕೆ ಮಹತ್ವ: ಬೆಂಗಳೂರಿಗೆ ಹಿಂತಿರುಗಿದ ನಂತರ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಆದೇಶಗಳನ್ನು ನೀಡಿ ಅವುಗಳ ಅನುಷ್ಠಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.

ದೆಹಲಿ ಭೇಟಿ ಫಲಪ್ರದ: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು.

ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ: ಏಪ್ರಿಲ್ 16 ಮತ್ತು 17 ರಂದು ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣೆಗೆ ಯಾವ ರೀತಿಯಲ್ಲಿ ಪೂರ್ವಭಾವಿ ತಯಾರಿಗಳನ್ನು ಮಾಡುಕೊಳ್ಳಬೇಕೆಂದು ಪಕ್ಷಕ್ಕೆ ಹಾಗೂ ನನಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯನ್ನು ನೀಡಿದ್ದಾರೆ.

LEAVE A REPLY

Please enter your comment!
Please enter your name here