ಬೆಂಗಳೂರು:
ವಿಧಾನ ಪರಿಷತ್ತಿನಲ್ಲಿ ಮಂಡನೆಯಾಗದ ಗೋ ಹತ್ಯೆ ನಿಷೇಧ ಮಸೂದೆಯ ನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ನಿಯಮಾ ವಳಿಗೆ ಒಪ್ಪಿಗೆ ನೀಡಿದ್ದು ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.
ಗೋವು ನಮ್ಮ ಭಾರತೀಯ ಸಂಸ್ಕೃತಿಯ,ಶ್ರದ್ದೆಯ ಹಾಗೂ ರೈತರ ಜೀವನಾಧಾರದ ಮೂಲವಾಗಿದೆ.ವರ್ಷದಿಂದ ವರ್ಷಕ್ಕೆ ಗೋವುಗಳ ಸಂ ಖ್ಯೆ ಗಣನೀಯವಾಗಿ ಕಡಿಮೆ ಆಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾ ಗಿದೆ.ಇಂತಹ ಸಂದರ್ಭ ದಲ್ಲಿ ಪಕ್ಷಭೇದವನ್ನು ಮರೆತು ಗೋವುಗಳ ಸಂರಕ್ಷಣೆಗೆ ಎಲ್ಲರೂ ಮುಂದಾದರೆ ನಾಡಿನ ಪಶುಸಂಪತ್ತು ವೃದ್ಧಿಸುತ್ತ ದೆ.ಕೇವಲ ರಾಜಕೀಯ ದುರುದ್ದೇಶಕ್ಕೆ ಮಸೂದೆಯನ್ನು ವಿರೋಧಿಸಿ ಸಮಾಜದಲ್ಲಿ ಜನಸಾಮಾನ್ಯರ ನಡುವೆ ತಪ್ಪು ಕಲ್ಪನೆ ಮೂಡಿಸುವುದು ಅಸಹನೀಯ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು. UNI