Karnataka Cabinet | Three of Five recommendations of the Bhaktavatsala Committee approved
ಬೆಂಗಳೂರು:
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಅನುಮೋದನೆ ನೀಡಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಅವರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಸಮಿತಿ ರಚಿಸಲಾಗಿತ್ತು. ಭಕ್ತವತ್ಸಲ ಸಮಿತಿಯ 5 ಶಿಫಾರಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದರು.
ನ್ಯಾಯಮೂರ್ತಿ ಕೆ. ಭಕ್ತವತ್ಸಲ ಅವರ ನೇತೃತ್ವದಲ್ಲಿ ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ರಚಿಸಿರುವ ಆಯೋಗದ ಶಿಫಾರಸ್ಸುಗಳನ್ನು ಅಂಗೀಕರಿಸಲು ಇಂದು ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ… pic.twitter.com/cgZdiPU8UC
— CM of Karnataka (@CMofKarnataka) October 5, 2023
ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣೆ, ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಇಂದು ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು ಎಂದರು.
