Home ರಾಜಕೀಯ Karnataka Caste Census Report | ಜಾತಿ ಗಣತಿ ವಿಚಾರವಾಗಿ ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ...

Karnataka Caste Census Report | ಜಾತಿ ಗಣತಿ ವಿಚಾರವಾಗಿ ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

8
0
Karnataka Caste Census Report | Discussion with Congress party's Vokkaliga MLAs tomorrow on caste census issue: DCM D.K. Shivakumar

ಬೆಂಗಳೂರು, ಏ.14: “ಜಾತಿ ಗಣತಿ ವಿಚಾರವಾಗಿ ನಾಳೆ (ಮಂಗಳವಾರ) ಕಾಂಗ್ರೆಸ್ ಪಕ್ಷದ ಒಕ್ಕಲಿಗ ಸಮುದಾಯದ ಶಾಸಕರ ಜತೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಉತ್ತರಿಸಿದರು.

ಜಾತಿ ಗಣತಿ ವರದಿ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ, “ನಾನು ಜಾತಿ ಗಣತಿ ವರದಿಯನ್ನು ಸಂಪೂರ್ಣವಾಗಿ ನೋಡಿಲ್ಲ, ಅದರ ಅಧ್ಯಯನ ಮಾಡಲಾಗುತ್ತಿದೆ. ನಾಳೆ ಕಾಂಗ್ರೆಸ್ ಪಕ್ಷದ ನಮ್ಮ ಸಮುದಾಯದ ಶಾಸಕರ ಸಭೆ ಕರೆದಿದ್ದೇನೆ. ಅವರ ಜತೆ ಚರ್ಚೆ ಮಾಡಿ, ಯಾರ ಮನಸ್ಸಿಗೂ ನೋಯಿಸದೇ ಎಲ್ಲರ ಗೌರವ ಕಾಪಾಡಲು ಸಲಹೆ ನೀಡುತ್ತೇವೆ” ಎಂದು ತಿಳಿಸಿದರು.

LEAVE A REPLY

Please enter your comment!
Please enter your name here