Home ಬೆಂಗಳೂರು ನಗರ Karnataka | ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ, ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ:...

Karnataka | ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ, ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

48
0
Karnataka | Caste survey report submission in November, survey will not divide society: Chief Minister Siddaramaiah
Karnataka | Caste survey report submission in November, survey will not divide society: Chief Minister Siddaramaiah

ಮೈಸೂರು:

ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷ ರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರೆ.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು ಎಂದರು.

ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಮೋದಿಯವರು ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ

ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ

ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು.

LEAVE A REPLY

Please enter your comment!
Please enter your name here