ಬೆಂಗಳೂರು:
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ.
ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಈ ವಿಶೇಷ ಪ್ಯಾಕೇಜನ್ನು ಘೋಷಿಸಲಾಗಿದೆ.
ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು ಎಂದರು.
ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ 3 ಸಾವಿರ, ಕಟ್ಟಡ ಕಾರ್ಮಿಕರಿಗೆ ತಲಾ 3 ಸಾವಿರ, ಅಗಸ, ಚಮ್ಮಾರ, ಕಮ್ಮಾರ ಸೇರಿದಂತೆ ಅಸಂಘಟಿತರಿಗೆ 2 ಸಾವಿರ, ರಸ್ತೆಬದಿ ವ್ಯಾಪಾರಿಗಳಿಗೆ 2 ಸಾವಿರ, ರಸ್ತೆ ಬದಿಯ ವ್ಯಾಪಾರಿಗಳಿಗೆ 2 ಸಾವಿರ, ಕಲಾವಿದರು, ಕಲಾ ತಂಡಕ್ಕೆ 3 ಸಾವಿರ ಹಾಗೂ ಸಾಲ ಮರುಪಾವತಿಗೆ 3 ತಿಂಗಳ ಅವಕಾಶ ಇದ್ದು, 3 ತಿಂಗಳ ಬಡ್ಡಿ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹೇಳಿದರು.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ 5 ಕೆಜಿ ಅಕ್ಕಿ ನೀಡಲಾಗುವುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೂ ರೇಷನ್ ಕೊಡಲಾಗುತ್ತದೆ. ಅಲ್ಲದೆ ಮೇ, ಜೂನ್ ರೇಷನ್ ಕೊಡಲಾಗುತ್ತೆ. ಪ್ಯಾಕೇಜ್ ನಲ್ಲಿ ಕಳೆದ ವರ್ಷದಂತೆ ಲೋಪ ಆಗದಂತೆ ಕ್ರಮವಹಿಸಲಾಗುತ್ತೆ.
ಉಪಮುಖ್ಯಮಂತ್ರಿಗಳಾದ @GovindKarjol, @LaxmanSavadi, ಸಚಿವರುಗಳಾದ @JagadishShettar, @ikseshwarappa, @BSBommai, @RAshokaBJP, @JCMBJP, @nimmasuresh, @VSOMANNA_BJP @STSomashekarMLA, @BABasavaraja, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
— CM of Karnataka (@CMofKarnataka) May 19, 2021
ಮುಖ್ಯಮಂತ್ರಿಯವರು ಘೋಷಣೆ ಮಾಡಿರುವ ಕೋವಿಡ್ 2ನೇ ಅಲೆಯ ಸಪೋರ್ಟ್ (ಬೆಂಬಲ) ಪ್ಯಾಕೇಜ್ ಅಂಶ ಹೀಗಿದೆ
• ಕೋವಿಡ್-19 ಸಾಂಕ್ರಾಮಿಕದ 2ನೇ ಅಲೆಯ ತೀವ್ರತೆಯಿಂದಾಗಿ, ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯನ್ನು ನಿಯಂತ್ರಿಸುವ ಸಲುವಾಗಿ, ಹಾಗೂ ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಮೇ 24, 2021 ರವರೆಗೆ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸುವುದು ಅನಿವಾರ್ಯವಾಗಿತ್ತು.
• ಈ ನಿರ್ಬಂಧನೆಗಳಿಂದ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳನ್ನು ಕಡಿಮೆಗೊಳಿಸಲು ಮತ್ತು ಸಾರ್ವಜನಿಕರ ದೈನಂದಿನ ಅಗತ್ಯತೆಗಳಿಗಾಗಿ ಕೃಷಿ, ಸರಕು ಸಾಗಾಣಿಕೆ, ಅಗತ್ಯ ಸೇವೆ, ಕಟ್ಟಡ ಕಾಮಗಾರಿಗಳು (in-situ), ಹೋಟೆಲ್ ಉದ್ಯಮ (ಡೆಲಿವರಿ ಮಾತ್ರ), ಇ ಕಾಮರ್ಸ್, ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣುಗಳನ್ನು ತಲುಪಿಸುವ ವ್ಯವಸ್ಥೆ, ಅಗತ್ಯ ಸೇವೆಗಾಗಿ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಸೇವೆ ಮುಂತಾದವುಗಳಿಗೆ ಅವಕಾಶ ಕಲ್ಪಿಸಲಾಗಿತ್ತು.
ಬೆಳಗ್ಗೆ 06 ರಿಂದ 10 ಘಂಟಯವರೆಗೆ ದಿನಸಿ, ಹಣ್ಣು, ತರಕಾರಿ, ಹೂವು, ಹಾಲು ಉತ್ಪನ್ನಗಳು ಮತ್ತು ಇನ್ನಿತರೆ ಅಗತ್ಯ ವಸ್ತುಗಳ ಖರೀದಿಗಾಗಿ ಅವಕಾಶ ಮಾಡಿಕೊಡಲಾಗಿದೆ.
• ಕೊರೋನಾ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ ಅನಿವಾರ್ಯವಾಗಿ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿದ್ದು, ಇದರಿಂದಾಗಿ ಜನರು ಆಹಾರವಿಲ್ಲದೇ ಸಂಕಷ್ಟಕ್ಕೆ ಸಿಲುಕಬಾರದೆಂದು ಸರ್ಕಾರವು ಈ ಕೆಳಗಿನಂತೆ ಜನರ ನೆರವಿಗೆ ಧಾವಿಸಿದೆ.
• ಕೋವಿಡ್ 1 ನೇ ಅಲೆಯಲ್ಲಿ ನಮ್ಮ ಸರ್ಕಾರವು ಹಲವಾರು ವಲಯಗಳಿಗೆ ಆರ್ಥಿಕ ಪ್ಯಾಕೇಜ್‌ನ್ನು ನೀಡಿರುತ್ತದೆ.
• ಕೋವಿಡ್ ಸೋಂಕಿಗೊಳಗಾದ ರೋಗಿಗಳಿಗೆ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರದಿಂದ ನಿಯೋಜಿಸಿದ (ಖಾಸಗಿ ಮತ್ತು ಸರ್ಕಾರಿ) ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ 1ನೇ ಮತ್ತು 2ನೇ ಅಲೆಯಲ್ಲಿ ಒಟ್ಟಾಗಿ ಇಲ್ಲಿಯವರೆಗೆ 2.06 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದ್ದು, ರೂ.956 ಕೋಟಿಗಳಿಗೂ ಹೆಚ್ಚು ಖರ್ಚು ಭರಿಸಲಾಗುತ್ತಿದೆ.
• 18 ರಿಂದ 45 ವರ್ಷದೊಳಗಿನ ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಲು ಉದ್ದೇಶಿಸಿದ್ದು, ಈಗಾಗಲೇ 3 ಕೋಟಿ ಡೋಸ್ ಲಸಿಕೆ ಖರೀದಿಗೆ ಆದೇಶ ನೀಡಲಾಗಿದ್ದು, ಇದಕ್ಕಾಗಿ ರೂ. 1000 ಕೋಟಿ ವೆಚ್ಚ ಭರಿಸಲಾಗುತ್ತಿದೆ.
• ಕೋವಿಡ್ ನಿರ್ವಹಣೆಗಾಗಿ ಎಸ್.ಡಿ.ಆರ್.ಎಫ್. ಹಣವನ್ನು ಪ್ರತಿ ಗ್ರಾಮ ಪಮಚಾಯ್ತಿಗಳಿಗೆ ರೂ.50,000/- ರಂತೆ ಮುಂಗಡವಾಗಿ ಡಲಾಗುವುದು.
ಇದರಿಂದ 6,000 ಗ್ರಾಮ ಪಂಚಾಯಿತಿಗಳಿಗೆ ಸಹಕಾರಿಯಾಗಲಿದೆ.
• ಕೋವಿಡ್ ಚಿಕಿತ್ಸೆಗೆ ಅನುಕೂಲವಾಗಲು 2,150 ವೈದ್ಯರನ್ನು 3 ದಿನಗಳೊಳಗಾಗಿ ನೇಮಕಾತಿ ಮಾಡಲಾಗುವುದು.