Home Uncategorized ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

54
0
Karnataka Chief Minister arrived in Mangalore

ಮಂಗಳೂರು:

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅಕ್ಟೋಬರ್ 13ರ ಬುಧವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡರು.

ನಂತರ ಮುಖ್ಯಮಂತ್ರಿಗಳು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಸ್ತೆ ಮಾರ್ಗವಾಗಿ ತೆರಳಿದರು.

LEAVE A REPLY

Please enter your comment!
Please enter your name here