Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
  • ಬೆಂಗಳೂರು ನಗರ

ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

The Bengaluru Live September 3, 2021 6:00 PM 1 minute read
ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಸ್ತೆ ಸಾರಿಗೆ ನಿಗಮಗಳನ್ನು ಲಾಭದಾಯಕವಾಗಿಸಲು ಪರಿಣತರ ಸಮಿತಿ ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಲಾಭದಾಯಕವಾಗಿಸಲು ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಪರಿಶೀಲಿಸಲು ಪರಿಣತರ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 60 ವರ್ಷದ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಇಂದು ನಿಗಮವು ಸಂಕಷ್ಟದಲ್ಲಿದೆ. ಆದರೆ ಸಮಸ್ಯೆಯನ್ನು ಬೆಳೆಯಲು ಬಿಡದೆ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಆದಾಯೋತ್ಪನ್ನ ಮಾದರಿಯಿದ್ದರೂ, ನಿಗಮ ನಷ್ಟದಲ್ಲಿರಲು ಕಾರಣಗಳನ್ನು ವಿಶ್ಲೇಷಿಸುವುದರೊಂದಿಗೆ, ನಿಗಮವನ್ನು ಲಾಭದಾಯಕವಾಗಿಸಲು ಸಲಹೆ ಸೂಚನೆಗಳನ್ನು ನೀಡಲು ಈ ಸಮಿತಿ ರಚಿಸಲಾಗುವುದು. ಕೆ.ಎಸ್.ಆರ್.ಟಿ.ಸಿ. ಗೆ ತನ್ನದೇ ಅಂತರ್ಗತವಾದ ಶಕ್ತಿ ಇದೆ; ವಿಸ್ತಾರವಿದೆ; ಜಾಲವಿದೆ. ಇವುಗಳನ್ನು ಹೆಚ್ಚಿಸುವುದು ಹೇಗೆ ಎಂಬ ಕುರಿತು ಸಹ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ನೌಕರರ ವೇತನ ಸೇರಿದಂತೆ, ನಿಗಮಕ್ಕೆ ಬೆಂಬಲ ನೀಡಲು ರಾಜ್ಯ ಸರ್ಕಾರ 2300 ಕೋಟಿ ರೂ. ಬಿಡುಗಡೆ ಮಾಡಿದೆ. ತಾವು ಮುಖ್ಯಮಂತ್ರಿಯಾದ ನಂತರವೂ 108 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ನಿಗಮದ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಚಿಂತನೆ, ಕಾರ್ಯವಿಧಾನಗಳಲ್ಲಿ ಬದಲಾವಣೆ ಅಗತ್ಯ; ಜೊತೆಗೆ ಕ್ಷಮತೆಯಿಂದ ನಿಗಮವನ್ನು ಮುನ್ನಡೆಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ನಿಗಮದ ಸುಧಾರಣೆಯೊಂದಿಗೆ ನೌಕರರ ಜೀವನಮಟ್ಟ ಸುಧಾರಣೆಗೂ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಸಾರಿಗೆ ಸಚಿವ @sriramulubjp, ಸಮಾಜ ಕಲ್ಯಾಣ ಸಚಿವ @KotasBJP, ಶಿಕ್ಷಣ ಸಚಿವ @BCNagesh_bjp, ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಚಂದ್ರಪ್ಪ, ಶಾಸಕ @ArshadRizwan, ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) September 3, 2021

ಕೆ.ಎಸ್.ಆರ್.ಟಿ.ಸಿ.ಯೊಂದಿಗೆ ಜನತೆ ಭಾವನಾತ್ಮಕ ಬಾಂಧವ್ಯ ಬೆಸೆದಿದ್ದಾರೆ. ಬಸ್ ಎಂದರೆ ಹಲವು ಅರ್ಥಗಳನ್ನು ಧ್ವನಿಸುತ್ತದೆ- ಪ್ರಯಾಣ, ಜೀವನದ ಪ್ರಯಾಣ, ಎಲ್ಲರಿಗೂ ಸ್ಥಳಾವಕಾಶ ಒದಗಿಸುವ ಸಮಾನತೆಯ ಪರಿಕಲ್ಪನೆ, ನಿರಂತರ ಚಾಲನಾ ಶಕ್ತಿ ಮೊದಲಾದ ವಿಚಾರಗಳು ನಮ್ಮಲ್ಲಿ ಸುಳಿಯುತ್ತದೆ. ಸರ್ಕಾರದಲ್ಲಿ ನಿರಂತರ ಚಲನಶೀಲತೆ ಹೊಂದಿರುವ ಇಲಾಖೆ ಸಾರಿಗೆ ಇಲಾಖೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಬಸ್ ಚಾಲಕರು ಅತ್ಯಂತ ಜವಾಬ್ದಾರಿಯ ಕೆಲಸ ನಿರ್ವಹಿಸುತ್ತಾರೆ. ಪ್ರಯಾಣದ ಅವಧಿಯಲ್ಲಿ ನಮ್ಮ ಜೀವ ಅವರ ಕೈಯಲಿರುತ್ತದೆ. ಆದ್ದರಿಂದ ಚಾಲಕರಿಗೆ ಮೊದಲ ಗೌರವ ಸಲ್ಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ವಿಶ್ವದಾದ್ಯಂತ ಸಾರಿಗೆ ವ್ಯವಸ್ಥೆಯಲ್ಲಿ ಎಷ್ಟೇ ಬದಲಾವಣೆಗಳಾದರೂ, ಬಸ್ ಸೇವೆ ನಿರಂತರವಾಗಿ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಹಳ್ಳಿಗಳಲ್ಲಿ ಬಸ್ ಬಂದರೆ ಚಟುವಟಿಕೆ ಪ್ರಾರಂಭವಾಗುತ್ತದೆ. ಈ ಎಲ್ಲ ಕಾರಣಗಳಿಗಾಗಿ ನಿಗಮ ತನ್ನದೇ ಆದ ಗೌರವವನ್ನು ಹೊಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ ಹೊಂದಿಕೊಳ್ಳುವ ಜೊತೆಗೆ ಪರಿಸರ ಸ್ನೇಹಿ ವಾಹನಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಬಿಎಂಟಿಸಿಯು 90 ವಿದ್ಯುತ್ ಚಾಲಿತ ಬಸ್ ಗಳನ್ನು ಖರೀದಿಸುತ್ತಿದೆ. ಅಂತೆಯೇ ಕೆ.ಎಸ್.ಆರ್.ಟಿ.ಸಿಯು 642 ಹೊಸ ಬಸ್ ಗಳನ್ನು ಖರೀದಿಸುತ್ತಿದೆ ಎಂದು ವಿವರಿಸಿದರು.

ಕೆ.ಎಸ್. ಆರ್. ಟಿ.ಸಿ. ಕಾರ್ಯಾಗಾರಗಳಲ್ಲಿ ಬಳಕೆಯಾಗುತ್ತಿರುವ ತಂತ್ರಜ್ಞಾನಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ಈ ತಂತ್ರಜ್ಞಾನಗಳು ಪೂರ್ಣಪ್ರಮಾಣದಲ್ಲಿ ಬಳಕೆಯಾಗಬೇಕು ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ನಾಲ್ಕೂ ನಿಗಮಗಳ ಅಪಘಾತ ರಹಿತ ಚಾಲನೆ ಮಾಡಿದ 60 ಚಾಲಕರಿಗೆ ಚಿನ್ನದ ಪದಕ ಪ್ರದಾನ ಮಾಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ 60ನೇ ವರ್ಷದ ಸವಿ ನೆನಪಿಗೆ ಅಂಚೆ ಲಕೋಟೆ ಬಿಡುಗಡೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ 60 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಇದರೊಂದಿಗೆ ನೌಕರರು ಮತ್ತು ಕುಟುಂಬದವರ ಅನುಕೂಲಕ್ಕಾಗಿ ಇನ್ಫೋಸಿಸ್ ಸಹಯೋಗದೊಂದಿಗೆ ಡಿಜಿಟಲ್ ಲರ್ನಿಂಗ್ ಕಾರ್ಯಕ್ರಮ ಹಾಗೂ ಆನ್ ಲೈನ್ ನಲ್ಲಿ ನೌಕರರ ಕುಂದುಕೊರತೆ ನಿವಾರಣಾ ವ್ಯವಸ್ಥೆಗೆ ಚಾಲನೆ ನೀಡಲಾಯಿತು.

ಸಮಾರಂಭದಲ್ಲಿ ಸಚಿವರಾದ ಬಿ.ಶ್ರೀರಾಮುಲು, ಕೋಟ ಶ್ರೀನಿವಾಸ ಪೂಜಾರಿ, ಬಿ.ಸಿ. ನಾಗೇಶ್, ಆನಂದ್ ಸಿಂಗ್, ಕೆ.ಎಸ್.ಆರ್.ಟಿ.ಸಿ. ಅಧ್ಯಕ್ಷ ಎಂ.ಚಂದ್ರಪ್ಪ, ಶಾಸಕ ರಿಜ್ವಾನ್ ಅರ್ಷದ್, ಕರ್ನಾಟಕದ ಛೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್, ಸಾರಿಗೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮತ್ತಿತರರು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಮಳೆ ನೀರಿನಿಂದ ಅನಾಹುತ ಆಗದಂತೆ ಬಿಬಿಎಂಪಿ ಮುನ್ನಚ್ಚರಿಕೆ ವಹಿಸಿದೆ ಎಂದ ಸಚಿವ ಅಶ್ವತ್ಥನಾರಾಯಣ
Next: ಸರಳ, ಸಾಂಪ್ರದಾಯಿಕ ದಸರಾ ಆಚರಿಸಲು ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ

Related Stories

ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM

Latest Post

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

November 18, 2026 2:02 PM
ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

November 18, 2026 10:49 AM
ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯ ಸಂಗ್ರಹ ಚಿತ್ರ; ಘಟನಾ ಸ್ಥಳವಲ್ಲ
  • ಅಪರಾಧ
  • ಬೆಂಗಳೂರು

ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ

The Bengaluru Live November 18, 2026 2:02 PM
ಶೋಧದ ವೇಳೆ ಗೇಟ್ ಬಳಿ ಲೋಕಾಯುಕ್ತ ಅಧಿಕಾರಿಗಳಿರುವ ಹಾಸನ ಜಿಲ್ಲೆಯ ಮನೆ
  • ಕರ್ನಾಟಕ

ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

The Bengaluru Live November 18, 2026 10:49 AM
ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರು: ಗಿರಿನಗರದಲ್ಲಿ ಸುಟ್ಟ ಗಾಯಗಳೊಂದಿಗೆ ವ್ಯಕ್ತಿ ಪತ್ತೆ; ಶಂಕಿತ ದಾಳಿಯ ಬಗ್ಗೆ ಪೊಲೀಸ್ ತನಿಖೆ
  • ಆದಾಯಕ್ಕಿಂತ ಹೆಚ್ಚು ಆಸ್ತಿ ಆರೋಪ: ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸಂಬಂಧಿತ ಹಾಸನದ ಐದು ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ
  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
©Copyright 2025 The Bengaluru Live All rights reserved. | MoreNews by AF themes.