ತಡಸ (ಹಾವೇರಿ):
ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.
3.3 ಕೋಟಿ ರೂ ವೆಚ್ಚದ ಕುಮಟಾ-ತಡಸ ಹೆದ್ದಾರಿ ಸುಧಾರಣೆ, 2 ಕೋಟಿ ರೂ ವೆಚ್ಚದ ಪಡುಬಿದ್ರಿ-ಚಿಕ್ಕಲಗುಡ್ಡ ಹೆದ್ದಾರಿ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ 2 ಕೋಟಿ ರೂ ವೆಚ್ಚದ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಸಚಿವರುಗಳಾದ @GovindKarjol, @CCPatilBJP, @BABasavaraja, ಗಣ್ಯರು ಉಪಸ್ಥಿತರಿದ್ದರು. (2/2) pic.twitter.com/moy262PZSJ
— CM of Karnataka (@CMofKarnataka) September 1, 2021
ನನ್ನ ಸಚಿವ ಸಂಪುಟದಲ್ಲಿರು ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಲೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.