Home ಬೆಂಗಳೂರು ನಗರ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

74
0
Karnataka Chief Minister Basavaraj Bommai met Union Home Minister Amit Shah in Delhi

ಬೆಂಗಳೂರು :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದರು.

ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರುಹೊತ್ತಿಗೆಯನ್ನು ನೀಡಿ ಅದರ ಸಾರಾಂಶವನ್ನು ಅಮಿತ್ ಷಾ ಅವರಿಗೆ ವಿವರಣೆ ನೀಡಿದರು. ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರು ಹಾಗೂ ಬಡವರಿಗೆ ಆಗುವ ಲಾಭಗಳ ಕುರಿತು ಐಸಾಕ್ ನಡೆಸಿರುವ ಅಧ್ಯಯನ ವರದಿಯನ್ನು ಇದೇ ಸಂದರ್ಭದಲ್ಲಿ ನೀಡಿದರು.

ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಅಮಿತ್ ಶಾ ಅವರು ಪ್ರಶಂಸೆ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಸ್ಥಿತಿಗತಿ ಕುರಿತು ಅಮಿಷಾ ಅವರ ಜೊತೆ ಬೊಮ್ಮಾಯಿ ಚರ್ಚೆ ನಡೆಸಿದರು.

LEAVE A REPLY

Please enter your comment!
Please enter your name here