ನವದೆಹಲಿ:
ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದಾರೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು ಎಂದು ಅವರು ದೆಹಲಿಯಿಂದಲೇ ವಿರೋಧಿ ಪಾಳಯಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬಿಎಸ್ವೈ ಭೇಟಿಯಾದರು. ಸಿಎಂ ಯಡಿಯೂರಪ್ಪಗೆ ಪುತ್ರ ವಿಜಯೇಂದ್ರ ಸಾಥ್ ನೀಡಿದರು.