Home ಬೆಂಗಳೂರು ನಗರ ಹಾಲಕೆರೆ ಸಂಗನಬಸವ ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಹಾಲಕೆರೆ ಸಂಗನಬಸವ ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

13
0
Karnataka Chief Minister condole on death of Halakere Sanganabasava Sri
bengaluru

ಬೆಂಗಳೂರು:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗದಗ ಜಿಲ್ಲೆ ಗಜೇಂದ್ರಗಡದ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Karnataka Chief Minister condole on death of Halakere Sanganabasava Sri

ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಠದ ಶಿವಯೋಗ ಮಂದಿರದ ಅಧ್ಯಕ್ಷರಾಗಿದ್ದ ಡಾ. ಅಭಿನವ ಅನ್ನದಾನ ಸ್ವಾಮೀಜಿಗಳು ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ೮೫ ವರ್ಷ ವಯಸ್ಸಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ನಸುಕಿನಲ್ಲಿ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳ ಕಾಲ ಅವರು ಕನ್ನಡ ನಾಡು, ನುಡಿ, ಲಿಂಗಾಯತ ಧರ್ಮಕ್ಕೆ ಸಲ್ಲಿಸಿದ ಸೇವೆ ಅಪಾರ. ಅವರ ನಿಧನದಿಂದ ಅಪಾರ ಭಕ್ತ ಸಮೂಹ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಅವರ ಭಕ್ತ ಸಮೂಹಕ್ಕೆ ನೀಡಲಿ ಎಂದು ಕೋರುತ್ತೇನೆ.

ಇತ್ತೀಚೆಗಷ್ಟೇ, ಕೆಲವೇ ದಿನಗಳ ಹಿಂದೆ ಹಾಲಕೆರೆ ಮಠದ ಸಮಾರಂಭದಲ್ಲಿ ಭಾಗವಹಿಸಿದ್ದೆ. ಶ್ರೀಗಳ ಆಶೀರ್ವಾದ ಪಡೆದಿದ್ದೆ. ಆದರೆ ಇಷ್ಟು ಬೇಗ ಅವರನ್ನು ಕಳೆದುಕೊಳ್ಳುತ್ತೇವೆ ಎಂಬ ಕಲ್ಪನೆ ಇರಲಿಲ್ಲ. ಅವರ ನಿಧನ ನನಗೆ ವೈಯಕ್ತಿಕವಾಗಿ ಬಹಳ ದುಃಖ ತರಿಸಿದೆ ಎಂದು ಮುಖ್ಯಮಂತ್ರಿ ಗಳು ಕಂಬನಿ ಮಿಡಿದಿದ್ದಾರೆ.

LEAVE A REPLY

Please enter your comment!
Please enter your name here