Home ಬೆಂಗಳೂರು ನಗರ ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

63
0
Veteran Kannada film actor S Shivaram dies at 83 to get state funeral
bengaluru

ಬೆಂಗಳೂರು:

ಹಿರಿಯ ಕಲಾವಿದ ಶಿವರಾಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಶಿವರಾಂ ಅವರ ಕೊಡುಗೆ ಅನನ್ಯ. ಆರು ದಶಕಗಳ ಸುದೀರ್ಘ ವೃತ್ತಿ ಜೀವನದಲ್ಲಿ ಸಹಾಯಕ ನಿರ್ದೇಶಕರಾಗಿ, ನಿರ್ಮಾಪಕರಾಗಿ, ನಟರಾಗಿ ಕಾರ್ಯನಿರ್ವಹಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ಶರಪಂಜರ, ಶುಭ ಮಂಗಳ, ನಾಗರಹಾವು ಸೇರಿದಂತೆ ಹಲವಾರು ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಮನೋಜ್ಞ ಅಭಿನಯ ನೀಡಿ ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರ ನಿಧನದ ಆಘಾತದಿಂದ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಬ್ಬ ಮೇರುನಟನನ್ನು ಕಳೆದುಕೊಂಡಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ.

ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬವರ್ಗದವರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

bengaluru

ಇದನ್ನೂ ಓದಿ: ಸರ್ಕಾರಿ ಗೌರವಗಳೊಂದಿಗೆ ನಟ ಶಿವರಾಂ ಅಂತ್ಯಕ್ರಿಯೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

Also Read: Veteran Kannada film actor S Shivaram dies at 83 to get state funeral

bengaluru

LEAVE A REPLY

Please enter your comment!
Please enter your name here