Basavaraj Bommai Discharged from hospital | ಆಸ್ಪತ್ರೆಯಿಂದ ಬಸವರಾಜ ಬೊಮ್ಮಾಯಿ ಡಿಸ್ಚಾರ್ಜ್
ಬೆಂಗಳೂರು:
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಒದಗಿಸಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಪ್ರಮುಖ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು ಎಂದು ಹೇಳಿದ್ದಾರೆ.
"ಈ ಸಾಲಿನ ಕೇಂದ್ರೀಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ 5,300 ಕೋಟಿ ಅನುದಾನ ಘೋಷಿಸಿದ ವಿತ್ತ ಸಚಿವೆ ಶ್ರೀಮತಿ @nsitharaman ಅವರಿಗೆ ಹಾಗೂ ಸನ್ಮಾನ್ಯ ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಮಸ್ತ ಕರ್ನಾಟಕದ ಪರವಾಗಿ ಧನ್ಯವಾದಗಳು" : ಮುಖ್ಯಮಂತ್ರಿ @BSBommai pic.twitter.com/BrRAYZQdZR
— CM of Karnataka (@CMofKarnataka) February 1, 2023
ಲೋಕಸಭೆಯಲ್ಲಿಂದು ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕರ್ನಾಟಕದಲ್ಲಿನ ಮಹತ್ವಕಾಂಕ್ಷೆಯ ಭ್ರದ್ರಾ ಮೇಲ್ದಂಡೆ ಯೋಜನೆಗೆ ರೂ. 5.630 ಕೋಟಿ ಅನುದಾನವನ್ನು ಘೋಷಿಸಿದ್ದಾರೆ.
