Home ಬೆಂಗಳೂರು ನಗರ ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ

ಅತಿವೃಷ್ಟಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಸಂವಾದ

38
0
Karnataka Chief Minister holds meeting with flood affected districts deputy commissioners

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅಗತ್ಯ ನೆರವಿಗೆ ಹಣಕಾಸು ಒದಗಿಸುವುದಾಗಿ ಹೇಳಿದ ಯಡಿಯೂರಪ್ಪ

ಬೆಂಗಳೂರು:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ಅತಿವೃಷ್ಟಿಯಾಗುತ್ತಿರುವ ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಚಿಕ್ಕಮಗಳೂರು ಹಾಗೂ ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಹೆಚ್ಚು ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದ ಮೂಲಕ ಪ್ರವಾಹ ಪರಿಸ್ಥಿತಿ ಯ ಬಗ್ಗೆ ಮಾಹಿತಿ ಪಡೆದರು.

Karnataka Chief Minister holds meeting with flood affected districts deputy commissioners

ವಿಡಿಯೋ ಸಂವಾದದಲ್ಲಿ ಪ್ರವಾಹ ಪೀಡಿತ ಗ್ರಾಮಗಳ ಗ್ರಾಮಸ್ಥರನ್ನು ಶೀಘ್ರವೇ ತೆರುವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ಹಾಗೂ ಪ್ರವಾಹ ಉಂಟಾಗುವ ಸಾದ್ಯತೆ ಇರುವ ಗ್ರಾಮಗಳನ್ನು ಸಹ ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ,ಎನ್ ಡಿಅರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳನ್ನು ಅಗತ್ಯ ಇರುವ ಜಿಲ್ಲೆಗಳಿಗೆ ತುರ್ತು ಕಳುಹಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

ಕಾಳಜಿ ಕೇಂದ್ರಗಳನ್ನು ಆದಷ್ಟು ಹೆಚ್ಚು ತೆರದು ಸರ್ವ ಸನ್ನದ್ದವಾಗಿಟ್ಟುಕೊಳ್ಳಬೇಕು.ಇಂತಹ ಸಂದರ್ಭದಲ್ಲಿಅಧಿಕಾರಿಗಳು ರಜೆ ಹಾಕದೆ ಕೆಲಸ‌ ಮಾಡಬೇಕು.ಹಣಕಾಸಿನ‌ ನೆರವು ಅಗತ್ಯವಿದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ತುರ್ತು ಪರಿಸ್ಥಿತಿಗೆ ಮುನ್ಸೂಚನೆಯಾಗಿ ಸೇನಾ ಹೆಲಿಕಾಪ್ಟರ್ ಗಳನ್ನು‌ ಸನ್ನದ್ದವಾಗಿಟ್ಟುಕೊಳ್ಳಬೇಕು.ಅಧಿಕಾರಿಗಳು 24 ಗಂಟೆ ಎಚ್ಚರಿಕೆಯಿಂದ‌ ಕೆಲಸ‌ ಮಾಡಬೇಕು ಮುಂದಿನ‌ 48 ಗಂಟೆ ಏನು ಅಗುತ್ತೆ ಅನ್ನೋದನ್ನ ಊಹೆ ಮಾಡಿ ಕೆಲಸ‌ ಮಾಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿ ಗಳಿಗೆ ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಸಹ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here