Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಹುಬ್ಬಳ್ಳಿ
  • ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು
  • ಹುಬ್ಬಳ್ಳಿ

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು

The Bengaluru Live March 6, 2022 4:00 PM 1 minute read
Karnataka Chief Minister inaugurated Regional Forensic Science Laboratory at Hubballi

ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿದ ಮುಖ್ಯಮಂತ್ರಿಗಳು

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಶೀಘ್ರದಲ್ಲಿಯೇ ಮಾದಕವಸ್ತು ವಿಭಾಗ ಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ:

ಹುಬ್ಬಳ್ಳಿಯಲ್ಲಿ ಶೀಘ್ರದಲ್ಲಿಯೇ ಮಾದಕ ವಸ್ತುಗಳ ಪತ್ತೆ ವಿಭಾಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಗೋಕುಲ ರಸ್ತೆಯಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ಪೊಲೀಸ್ ಇಲಾಖೆಯ ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು.

ಡಿಎನ್‍ಎ, ಸೈಬರ್, ಮೊಬೈಲ್, ದಾಖಲೀಕರಣ ಹಾಗೂ ಆಡಿಯೋ ವೀಡಿಯೋ ವಿಭಾಗಗಳನ್ನು ಈ ಭಾಗದಲ್ಲಿ ತೆರೆಯಲಾಗಿದೆ. ಮಾದಕವಸ್ತುಗಳ ವಿಭಾಗವನ್ನು ಪ್ರಾರಂಭಿಸುವ ಅಗತ್ಯವಿದೆ. ಈಗಾಗಲೇ 80 ಮಂದಿ ವಿಜ್ಞಾನಿಗಳನ್ನು ಆಯ್ಕೆ ಮಾಡಲಾಗಿದೆ. ತರಬೇತಿ ಪಡೆದ ನಂತರ ಹುಬ್ಬಳ್ಳಿ ಮತ್ತು ಬಳ್ಳಾರಿಗೆ ಇವರನ್ನು ನೇಮಕ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಅಪರಾಧಗಳನ್ನು ನಿಯಂತ್ರಿಸಲು ಕಾನೂನು ಸದಾ ಅಪರಾಧಕ್ಕಿಂತಲೂ ಮುಂಚತವಾಗಿಯೇ ರೂಪುಗೊಳ್ಳಬೇಕು. ಅದಕ್ಕಾಗಿ ವಿಜ್ಞಾನ, ತರಬೇತಿ, ಇಂದೀಕರಣ ಎಲ್ಲವೂ ನಿರಂತರವಾಗಿ ನಡೆಯಬೇಕು. ಮಾದಕವಸ್ತುಗಳ ನಿಯಂತ್ರಣಕ್ಕಾಗಿ ನಮ್ಮ ರಾಜ್ಯ ಪೋಲೀಸರು ಉತ್ತಮ ಕೆಲಸವನ್ನು ಮಾಡಿದ್ದಾರೆ. ಭಾರತದಲ್ಲಿ ಕಳೆದ 5 ವರ್ಷಗಳಲ್ಲಿ ವಶ ಪಡಿಸಿಕೊಂಡಷ್ಟು ಮಾದಕ ವಸ್ತುವನ್ನು ಒಂದು ವರ್ಷದಲ್ಲಿ ಕರ್ನಾಟದಲ್ಲಿ ವಶಪಡಿಸಿಕೊಳ್ಳಲಾಯಿತು. ಸರ್ಕಾರ ಅದನ್ನು ಸಂಪೂರ್ಣವಾಗಿ ನಾಶ ಮಾಡಲಾಗಿದೆ. ಅತಿ ಹೆಚ್ಚು ಮುಟ್ಟುಗೋಲು ಹಾಕಿಕೊಂಡಿದ್ದು, ಹೆಚ್ಚಿನ ಪ್ರಕರಣಗಳು ಹಾಗೂ ಬಂಧನಗಳನ್ನು ಕರ್ನಾಟಕ ಪೋಲೀಸರು ಮಾಡಿದ್ದಾರೆ ಎಂದು ತಿಳಿಸಿದರು.

Karnataka Chief Minister inaugurated Regional Forensic Science Laboratory at Hubballi

ಉತ್ತರ ಕರ್ನಾಟಕದ ಅತ್ಯಾಧುನಿಕ ಕೇಂದ್ರವಾಗಬೇಕು: ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯವು ಉತ್ತರ ಕರ್ನಾಟಕದ ಅತ್ಯಾಧುನಿಕ ಪ್ರಾದೇಶಿಕ ಕೇಂದ್ರವಾಗಬೇಕು. ಆಧುನಿಕ ಕಟ್ಟಡವಾದರೆ ಸಾಲದು, ಆಧುನಿಕ ಉಪಕರಣ, ತರಬೇತಿ ಹೊಂದಿದ ಸಿಬ್ಬಂದಿ, ಟಿಲಿಮೆಡಿಸಿನ್ ಮತ್ತು ಮ್ಯಾಪಿಂಗ್ ನಿಂದ 2-3 ಜಿಲ್ಲೆಗಳಿಗೆ ಹೃದ್ರೋಗಿಗಳಿಗೆ ತ್ವರಿತವಾಗಿ ಚಿಕಿತ್ಸೆಯನ್ನು ನೀಡಲು ಈಗಾಗಲೇ ಆದೇಶ ನೀಡಲಾಗಿದೆ ಎಂದರು.

ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಕ್ರಮ: ಬದ್ಧತೆಯಿದ್ದರೆ, ವಾಸ್ತವ ರೂಪಕ್ಕೆ ಯೋಜನೆಗಳು ಬರುತ್ತವೆ. ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಎಫ್.ಎಸ್.ಎಲ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕಳೆದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಈ ಬಾರಿ ಅದು ಅಸ್ತಿತ್ವಕ್ಕೆ ಬಂದಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಎಫ್.ಎಸ್.ಎಲ್ ಪ್ರಯೋಗಾಲಯಗಳು ಅಪರಾಧ ಪತ್ತೆ ಹಚ್ಚಲು ಮಹತ್ವದ ಪಾತ್ರ ನಿರ್ವಹಿಸುತ್ತವೆ. ನ್ಯಾಯಾಲಯಗಳಲ್ಲಿ ಸಾಕ್ಷ್ಯಾಧಾರಗಳಿಗೆ ವೈಜ್ಞಾನಿಕ ಪುರಾವೆಗಳು ಎಫ್‍ಎಸ್‍ಎಲ್ ಪ್ರಯೋಗಾಲಯಗಳು ಒದಗಿಸುತ್ತವೆ. ಇಂಥ ಪ್ರಯೋಗಾ¯ಯ ಕೇವಲ ಬೆಂಗಳೂರಿನಲ್ಲಿ ಮಾತ್ರವಿತ್ತು. ಡಿಎನ್‍ಎ ಮತ್ತು ಸೈಬರ್ ಅಪರಾಧಗಳ ಪತ್ತೆಯ ವರದಿಗಳು 2-3 ತಿಂಗಳಲ್ಲಿ ಲಭ್ಯವಾಗುತ್ತಿವೆ. ಸೈಬರ್ ಅಪರಾಧಗಳು ಡಿಜಿಟಲ್ ವೇದಿಕೆಗಳ ಮೂಲಕ ಹೆಚ್ಚಾಗುತ್ತಿವೆ. ಅದಕ್ಕೂ ಪರಿಹಾರ ಕಂಡುಕೊಳ್ಳಲು ಕ್ರಮ ವಹಿಸಲಾಗಿದೆ. ಸೈಬರ್ ಅಪರಾಧಗಳನ್ನು ತಡೆಯಲು ಖಾತೆಯಿಂದ ಹಣ ಕಡಿತವಾಗಿರುವ ಸಂದೇಶ ಬಂದ ಕೂಡಲೇ ಅದು ಫ್ರಾಡ್ ಎಂದು ಗೊತ್ತಾಗುತ್ತಿದ್ದಂತೆಯೇ 112 ಗೆ ಕರೆ ಮಾಡಿದರೆ ಒಂದು ಸಂಖ್ಯೆ ಜನರೇಟ್ ಆಗುತ್ತದೆ. ಅಪರಾಧ ಎಸಗಿರುವವರ ಖಾತೆ ಮತ್ತು ಹಣ ಕಳೆದುಕೊಂಡಿರುವವ ಖಾತೆಯ ಮಾಹಿತಿಯಿಂದ 20 ನಿಮಿಷಗಳೊಳಗೆ ಖಾತೆ ಬ್ಲಾಕ್ ಮಾಡಿ ಹಣ ಹಿಂದಿರುಗಿ ಪಡೆಯಲು ಸಾಧ್ಯವಾಗಿದೆ. ಇದು ಕರ್ನಾಟಕದಿಂದಲೇ ಪ್ರಾರಂಭವಾಗಿರುವುದು ಹೆಮ್ಮೆಯ ಸಂಗತಿ ಎಂದರು.

ಸ್ಥಳೀಯ ಉತ್ಪನ್ನ/ ಪ್ರತಿಭೆಗೆ ಇಂಬು: ಆದಷ್ಟು ಬೇಗನೇ ಎಫ್‍ಎಂಸಿಜಿ ಸ್ಥಾಪನೆಗೆ ಆದೇಶ ಮಾಡಲಾಗಿದ್ದು, ಈಗಾಗಲೇ ಸ್ಥಳ ನಿಗದಿಯಾಗಿದೆ. ಕ್ಲಸ್ಟರ್ ಬೇಗ ನಿರ್ಮಾಣವಾದಲ್ಲಿ ಯುವಕರಿಗೆ ಉದ್ಯೋಗ ದೊರೆಯಲಿದೆ. ಇಲ್ಲಿ ಕನಿಷ್ಠ ವಿದ್ಯಾರ್ಹತೆ ಪಡೆದವರಿಂದ ಹಿಡಿದು ತಾಂತ್ರಿಕ ಶಿಕ್ಷಣ ಪಡೆದವರಿಗೂ ಉದ್ಯೋಗ ದೊರೆಯಲಿದೆ. ಉತ್ತರ ಕರ್ನಾಟಕದ ಎಲ್ಲಾ ಆರ್ಥಿಕ ಮತ್ತು ಶೈಕ್ಷಣಿಕ ಸ್ಥರಗಳ ಯುವಕರಿಗೆ ಉದ್ಯೋಗ ಸಿಗುವುದು ಇದರ ವೈಶಿಷ್ಟ್ಯತೆ. ಉದ್ಯೋಗ ನೀತಿಯನ್ನು ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. ಉದ್ಯೋಗ ಹೆಚ್ಚು ನೀಡುವವರಿಗೆ ಹೆಚ್ಚಿನ ಪ್ರೋತ್ಸಾಹಕಗಳನ್ನು ನೀಡಲಾಗುವುದು. ಜವಳಿ ಕೇಂದ್ರ, ಎಫ್‍ಎಂಸಿಜಿ, ಸೆಮಿ ಕಂಡ್ಟರ್, ಹಲವಾರು ವಲಯಗಳನ್ನು ಗುರುತಿಸಿದ್ದೇವೆ. ಸ್ಥಳೀಯವಾಗಿ ತಯಾರಾಗುವ ಪ್ರಸಿದ್ಧ ವಸ್ತುಗಳಿಗೆ ಇಂಬು ನೀಡಿ, ಹಣಕಾಸಿನ ಸಹಾಯ, ಬ್ರಾಂಡಿಂಗ್, ತಾಂತ್ರಿಕತೆ, ಮಾರುಕಟ್ಟೆ ವ್ಯವಸ್ಥೆ ನೀಡಿದರೆ ಬಹಳ ದೊಡ್ಡ ಪ್ರಮಾಣದಲ್ಲಿ ಅವುಗಳ ಬೆಳವಣಿಗೆ ಕಾಣಬಹುದು.

ಬಜೆಟ್ ನಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು: ಕಲ್ಯಾಣ ಕರ್ನಾಟಕದ ಶಹಾಬಾದಿನಿಂದ ಗುಳೇಗುಡ್ಡದ ಮೊಳಕಾಲ್ಮೂರು ಸೀರೆಯಿಂದ ಹಿಡಿದು ಧಾರವಾಡದ ಕಸೂರಿ , ನವಲಗುಂದದ ಜಮಖಾನೆಯವರೆಗೂ ಸ್ಥಳೀಯ ಪ್ರತಿಭೆಗೆ ಕ್ಲಸ್ಟರ್ ರೂಪಿಸಿ ತಾಂತ್ರಿಕ ಬೆಂಬಲ ನೀಡಿದರೆ ಅಲ್ಲಿಯೇ ಹೆಚ್ಚಿನ ಉದ್ಯೋಗವನ್ನು ಸೃಷ್ಟಿ ಮಾಡುವ ಪ್ರಯತ್ನವನ್ನು ಮಾಡಲಾಗುತ್ತಿದೆ. ಮಹತ್ವಾಕಾಂಕ್ಷಿ ಬಜೆಟ್ ನ್ನು ಮಂಡಿಸಲಾಗಿದೆ. ಇದನ್ನು ಪ್ರಾಮಾಣಿವಾಗಿ ಅನುಷ್ಠಾನ ಮಾಡಲು 24/7 ಸರ್ಕಾರ ಕೆಲಸ ಮಾಡಲಿದೆ.

ಕರ್ನಾಟಕ ಕ್ಯಾನ್ಸರ್ ಸಂಸ್ಥೆ 25 ವರ್ಷಗಳಿಂದ ಉತ್ತಮ ಕೆಲಸ ಮಾಡಿದೆ. ಅಲ್ಲಿಗೆ ಆಧುನಿಕ ಉಪಕರಣಗಳನ್ನು ಖರೀದಿಸಲು ಹೆಚ್ಚಿನ ಹಣಕಾಸಿನ ನೆರವನ್ನು ಈಗಾಗಲೇ ಬಜೆಟ್‍ನಲ್ಲಿ ಮೀಸಲಿರಿಸಿದೆ. ಕೃಷಿ, ಕೈಗಾರಿಕೆ, ಮತ್ತು ಸೇವಾ ವಲಯದಲ್ಲಿ ಬೆಳವಣಿಗೆ ಮಾಡುವ ತೀರ್ಮಾನ ಮಾಡಿ, ಬೆಳವಣಿಗೆಗೆ ಕೇಂದ್ರಿತ, ಎಲ್ಲವನ್ನೂ ಒಳಗೊಂಡ, ಸಾಮಾಜಿಕ ಮತ್ತು ಪ್ರಾದೇಶಿಕ ಸಮಾನತೆ ತರುವ ಬಜೆಟ್ ಮಂಡಿಸಲಾಗಿದೆ. ಲಿಂಗ ಸಮಾನತೆ ತರಲು ಹೆಣ್ಣು ಮಕ್ಕಳಿಗೆ ಹೆಚ್ಚು ಅವಕಾಶಗಳನ್ನು ನೀಡುವ ಯೋಜನೆಗಳಿವೆ. ಸಮಗ್ರವಾದ ಬಜೆಟ್ ಆಗಿದೆ. ಇದನ್ನು ರೂಪಿಸಲು ಬಹಳಷ್ಟು ಚಿಂತನೆ ಮಾಡಲಾಗಿದೆ.

ಆರ್ಥಿಕತೆ ದುಡಿಮೆಯಿಂದ ಬೆಳೆಯುತ್ತದೆ. ಆದ್ದರಿಂದ ನಮ್ಮ ಆರ್ಥಿಕತೆ ಜನರನ್ನು ಆಧರಿಸಿದೆ. ದುಡಿಮೆಯೇ ದೊಡ್ಡಪ್ಪ ಎನ್ನುವ ಒಳತಿರುಳನ್ನು ಅರಿತು, ದುಡಿಮೆಗೆ ಒತ್ತು ನೋಡಲಾಗಿದೆ. ಎಲ್ಲರೂ ಸೇರಿ ಕರ್ನಾಟಕವನ್ನು ಕಟ್ಟುವ ಚಿಂತನೆಯಿಂದ ಯೋಜನೆಗಳನ್ನು ರೂಪಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಸೂಕ್ತ ಸ್ಥಳ ನಿಗದಿ ಮಾಡಿದರೆ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ನೀಡಲಾಗುವುದು ಎಂದರು.

ಕಾಲಮಿತಿಯೊಳಗೆ ಯೋಜನೆಗಳ ಅನುಷ್ಠಾನ: ಉತ್ತರ ಕರ್ನಾಟಕ ಅಭಿವೃದ್ದಿಗೆ ಬಜೆಟ್ ನಲ್ಲಿ ಹೇಳಿರುವುದನ್ನು ನಿಗದಿತ ಸಮಯದಲ್ಲಿ ಕಾರ್ಯಗತವಾಗಿ, ಬಡಜನರಿಗೆ, ಯುವಕರಿಗೆ, ಶಿಕ್ಷಣದಿಂದ ವಂಚಿತರಾದವರಿಗೆ ಸೌಲಭ್ಯ ದೊರಕಿಸಲಾಗಿದೆ. ಧಾರವಾಡದಿಂದ ಬೆಳಗಾವಿ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಶೀಘ್ರದಲ್ಲಿಯೇ ಇದನ್ನು ಪ್ರಾರಂಭಿಸಲಾಗುವುದು. ಹುಬ್ಬಳ್ಳಿ, ಅಂಕೋಲಾ ರೈಲ್ವೆ ಮಾರ್ಗಕ್ಕೆ ಪರಿಸರದ ಅನುಮೋದನೆ ಪಡೆದು ಇದೇ ವರ್ಷ ಪ್ರಾರಂಭಿಸಲು ಎಲ್ಲಾ ಪ್ರಯತ್ನಗಳನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ನೆರವಿನಿಂದ ಮಾಡಲಾಗುವುದು ಎಂದು ಭರವಸೆ ನೀಡಿದರು.

About the Author

The Bengaluru Live

Administrator

Visit Website View All Posts

Post navigation

Previous: 3.89 ಕೋಟಿ ಮೌಲ್ಯದ 6 ಎಕರೆ 26 ಗುಂಟೆ ಪ್ರದೇಶ ಒತ್ತುವರಿ ತೆರವು: ಜೆ. ಮಂಜುನಾಥ್
Next: ಮೇಕೆದಾಟು ಯೋಜನೆ ಡಿಪಿಆರ್ ಗೆ ಅನುಮೋದನೆ ನೀಡಲು ಕೇಂದ್ರಕ್ಕೆ ಮನವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Related Stories

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
  • ಬೆಂಗಳೂರು ನಗರ
  • ನವ ದೆಹಲಿ
  • ಶಿಕ್ಷಣ
  • ಹುಬ್ಬಳ್ಳಿ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

The Bengaluru Live July 26, 2026 3:03 PM
ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
  • ಶಿಕ್ಷಣ
  • ನವ ದೆಹಲಿ
  • ಹುಬ್ಬಳ್ಳಿ

ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

The Bengaluru Live July 25, 2026 8:32 PM
ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ
  • ಹುಬ್ಬಳ್ಳಿ

ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ

The Bengaluru Live July 14, 2026 7:56 PM

Latest Post

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM

ನೀವು ತಪ್ಪಿಸಿಕೊಂಡಿರಬಹುದು

ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
©Copyright 2025 The Bengaluru Live All rights reserved. | MoreNews by AF themes.