ಸಮಸ್ಯೆ ಬಗೆಹರಿಸದ ಕುರಿತು ವರದಿ ಕೇಳಿದ ಮುಖ್ಯಮಂತ್ರಿಗಳು
ಬೆಂಗಳೂರು:
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿ @siddaramaiah ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಅಹವಾಲುಗಳನ್ನು ಆಲಿಸಿ, ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವ ಮೂಲಕ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಗೆ ಸಮರ್ಪಕವಾಗಿ ಹಣ ಪಾವತಿಯಾಗುವಂತೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. pic.twitter.com/VxT9U4Y18g
— CM of Karnataka (@CMofKarnataka) May 31, 2023
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ಅಧಿಕಾರಿಗಳಿಗೆ ಸೂಚಿಸಿದರು.