Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಕಲಬುರ್ಗಿ
  • ಕಲಬುರಗಿಯಲ್ಲಿ ನೂತನ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶಂಕುಸ್ಥಾಪನೆ:
  • ಕಲಬುರ್ಗಿ

ಕಲಬುರಗಿಯಲ್ಲಿ ನೂತನ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶಂಕುಸ್ಥಾಪನೆ:

The Bengaluru Live July 10, 2021 5:30 PM 1 minute read
ಕಲಬುರಗಿಯಲ್ಲಿ ನೂತನ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶಂಕುಸ್ಥಾಪನೆ:

ಕಲಬುರಗಿಯಲ್ಲಿ ನೂತನ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶಂಕುಸ್ಥಾಪನೆ:

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಅನ್ನದಾತನ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ -ಬಿ.ಎಸ್. ಯಡಿಯೂರಪ್ಪ

ಕಲಬುರಗಿ:

ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು.

ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರ ಇವರ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಅವರು ಮಾತನಾಡಿದರು.

ಅನ್ನದಾತ ಬೆಳೆದ ಬೆಳೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪೆÇ್ರೀತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ “ಕಿಸಾನ್ ರೈಲು” ಯೋಜನೆ ಜಾರಿಗೆ ತಂದಿದ್ದು, ರೈತರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ. ಹಾಗೂ ಕಲಬುರಗಿ ನಾಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ತುಂಬಾ ಸಂತೋಷದಿಂದ ಅಡಿಗಲ್ಲು ನೆರವೇರಿಸಿದ್ದೇನೆ. ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.

Karnataka Chief Minister laid Foundation stone for construction of Vegetable Market at Kalaburagi 1

ಕಲಬುರಗಿ ನಗರದ ಕಣ್ಣಿ ಮಾರುಕಟ್ಟೆಯಲ್ಲಿ ಸಿದ್ದಗೊಳ್ಳಲಿರುವ ನೂತನ ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರ ಹಾಗೂ ಜನರ ಬಹುದಿನಗಳ ಕನಸು ನನಸಾಗಲಿದ್ದು, ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡಿ ನಷ್ಟ ಅನುಭವಿಸುತ್ತಿದ್ದ ಮತ್ತು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದ ರೈತಾಪಿ ವರ್ಗಕ್ಕೆ ಇದರಿಂದ ನೆಮ್ಮದಿ ಸಿಕ್ಕಿದೆ. ರಸ್ತೆಯುದ್ದಕ್ಕು ಜನ ಗುಂಪಾಗಿ ಸೇರುವ ಕಾರಣ ಅಪಘಾತವಾಗುವ ಸಾಧ್ಯತೆಗಳನ್ನು ಮನಗಂಡು ನೂತನ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಇದರಿಂದ ಪ್ರದೇಶದಲ್ಲಿನ ಮುಕ್ತ ಸಂಚಾರಕ್ಕೂ ಅನುವಾಗಲಿದೆ ಎಂದರು.

ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪೆÇ್ರೀತ್ಸಾಹ ನೀಡಿದೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‍ಗೆ ತಲಾ 10000 ರೂ. ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್‍ಗೆ ತಲಾ 10000 ರೂ. ಗಳಂತೆ 69000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.

ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್‍ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್‍ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್‍ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರೀಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್‍ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಸಿ.ಎಂ. ಯಡಿಯೂರಪ್ಪನವರು ವಿವರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯು ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಇದಲ್ಲದೆ ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಸಹ ಲೋಕಾರ್ಪಣೆ ಮಾಡಲಾಗಿದೆ ಎಂದರು.

ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಈ ನೂತನ ಮಾರುಕಟ್ಟೆಯಿಂದ ಪ್ರದೇಶದ ರೈತರು ಸುಲಲಿತವಾಗಿ ವ್ಯಾಪಾರ ಮಾಡಬಹುದು. ಮಳಿಗೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲಿ ಎಂದು ಆಶಿಸಿದರು.

Karnataka Chief Minister laid Foundation stone for construction of Vegetable Market at Kalaburagi 2

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಎಂ. ಕಾರಜೋಳ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ವಿಧಾನಸಭೆಯ ಶಾಸಕರುಗಳಾದ ಎಂ.ವೈ.ಪಾಟೀಲ, ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಳಗೆ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕಲಬುರಗಿ ಎ.ಪಿ.ಎಂ.ಸಿ. ಅಧ್ಯಕ್ಷ ಗುರುಬಸಪ್ಪ ಕಣಿಕಿ, ನಗರಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಎಂ.ಎನ್ ಅಜಯ ನಾಗಭೂಷಣ, ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ, ಐ.ಜಿ.ಪಿ ಮನೀ ಖರ್ಬಿಕರ್, ಕಲಬುರಗಿ ನಗರ ಪೆಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಕಲಬುರಗಿ ಜಿಲ್ಲಾ ಪೆಲೀಸ್ ಅಧೀಕ್ಷಕ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ. ದಿಲೀಷ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ನಗರಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಚಪ್ಪಾ ಸೇರಿದಂತೆ ಇನಿತರ ಜನಪ್ರತಿನಿಧಿಗಳು, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಸ್ವಾಗತಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಧಯಾಘನ್ ಧಾರವಾಡಕರ್ ಅವರು ವಂದಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಹೆಗಲ ಮೇಲೆ ಕೈ ಹಾಕಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತನೋರ್ವಗೆ ಬಾರಿಸಿದ ಡಿಕೆ ಶಿವಕುಮಾರ್
Next: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಈ ವರ್ಷವೇ 8,500 ಸ್ಮಾರ್ಟ್‌ಕ್ಲಾಸ್‌ ರೂಂ ಅಭಿವೃದ್ಧಿ: ಡಿಸಿಎಂ

Related Stories

karnataka-cabinet-meeting-file
  • ಕರ್ನಾಟಕ
  • ಕಲಬುರ್ಗಿ

ಕನ್ನೂರು ಬಳಿ ಬೆಣ್ಣೆತೊರೆ ನದಿಗೆ ಸೇತುವೆ, ಅಪ್ರೋಚ್ ರಸ್ತೆ ಎತ್ತರಿಸಲು ಸಂಪುಟ ಅನುಮೋದನೆ

The Bengaluru Live November 6, 2026 7:39 AM
karnataka-cabinet-meeting-file
  • ಕರ್ನಾಟಕ
  • ಕಲಬುರ್ಗಿ

ಸನ್ನತಿ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅನುಮೋದನೆ

The Bengaluru Live November 6, 2026 6:49 AM 1
ಪ್ರಧಾನಿ ಕಾರ್ಯಾಲಯದ ಗ್ರಾಫಿಕ್‌ನಲ್ಲಿ ಬಳಸಿರುವ ಎಡಭಾಗದ ಮಖಾನಾ ಮತ್ತು ಬಲಭಾಗದ ತೊಗರಿ ಬೇಳೆಯ ಚಿತ್ರಗಳು
  • ಕರ್ನಾಟಕ
  • ಕಲಬುರ್ಗಿ

ಕಲಬುರಗಿಯ ತೊಗರಿ ಬೇಳೆ ಮಾಲ್ಡೀವ್ಸ್‌ಗೆ ತಲುಪುತ್ತಿದೆ: ಪ್ರಧಾನಿ ಮೋದಿ

The Bengaluru Live October 25, 2026 1:33 PM 1

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.