Home ಕಲಬುರ್ಗಿ ಮುಖ್ಯಮಂತ್ರಿಗಳಿಂದ 96.24 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಮುಖ್ಯಮಂತ್ರಿಗಳಿಂದ 96.24 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

36
0
Karnataka Chief Minister lays foundation stone for Rs 96.24 crore works in Kalaburagi
Advertisement
bengaluru

ಕಲಬುರಗಿ:

ಶುಕ್ರವಾರ ಕಲಬುರಗಿ ನಗರದ ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಜರುಗಿದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್‍ನಲ್ಲಿ ವಸತಿ ನಿಲಯ ಸ್ಥಾಪನೆ ಸೇರಿದಂತೆ ಕಲಬುರಗಿ ನಗರದಲ್ಲಿ ನಗರಾಭಿವೃದ್ಧಿ ಯೋಜನೆ ಹಾಗೂ ಕೆ.ಕೆ.ಆರ್.ಡಿ.ಬಿ ಮಂಡಳಿಯ ಅನುದಾನದ ಒಟ್ಟು 96.24 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಬೆಂಗಳೂರಿನ ಹೆಚ್. ಎಸ್. ಆರ್ ಲೇಔಟ್ ನಲ್ಲಿ ಬಾಲಕ-ಬಾಲಕಿಯರ ವಸತಿ ನಿಲಯ ಮತ್ತು ಆಡಳಿತ ಕಚೇರಿ ನಿರ್ಮಾಣಕ್ಕಾಗಿ 59 ಕೋಟಿ ರೂ. ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ಹಾಕಲಾಗಿದ್ದು, ಬೃಹತ್ ವಸತಿ ನಿಲಯ ತಲೆ ಎತ್ತಲಿದೆ. ಇದು ಈ ಭಾಗದ ಯುವಕರಿU, ನಿರುದ್ಯೋಗಿಗಳಿಗೆÉ ಅನುಕೂಲವಾಗಲಿದೆ ಎಂದರು.

ಕಲಬುರಗಿ ನಗರದ ವಿವಿಧ ಪ್ರದೇಶಗಳಲ್ಲಿ ಕೆ.ಕೆ.ಆರ್.ಡಿ.ಬಿ, ಅನುದಾನದ 330.82 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ತೆರೆದ ಚರಂಡಿಗೆ ಕೊಳವೆ ಮಾರ್ಗಗಳ ದುರಸ್ತಿ ಮತ್ತು ಒಳಚರಂಡಿ ವ್ಯವಸ್ಥೆಗೆ ಜೋಡಣೆ ಮಾಡುವ ಕಾಮಗಾರಿಗೂ ಇಲ್ಲಿ ಚಾಲನೆ ನೀಡಲಾಯಿತು.

bengaluru bengaluru

ನಗರಾಭಿವೃದ್ಧಿ ಅನುದಾನದಡಿಯಲ್ಲಿ 135 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಲಬುರಗಿ ನಗರದಲ್ಲಿ ಸಿಗ್ನಲ್‍ಗಳ ಉದ್ಘಾಟನೆ ಹಾಗೂ 1738.28 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರದ ಹೀರಾಪೂರ ವೃತ್ತದಿಂದ ಎಸ್.ವಿ.ಪಿ ವೃತ್ತದವರೆಗೆ, ಅನ್ನಪೂರ್ಣ ಕ್ರಾಸ್‍ದಿಂದ ಖರ್ಗೆ ಪೆಟ್ರೋಲ್ ಬಂಕ್ ವರೆಗೂ ಹಾಗೂ ಜಗತ್ ವೃತ್ತದಿಂದ ಎಸ್.ವಿ.ಪಿ ವೃತ್ತದವರೆಗೆ ಬಸ್ ರಾಪಿಡ್(ಡಿಚಿಠಿiಜ) ಟ್ರಾನ್ಸಿಟ್ ಜೊತೆಗೆ ಸೈಕಲ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

2020-21ನೇ ಸಾಲಿನ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ 683 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕಲಬುರಗಿ ನಗರದ ಮೋಹನ್ ಲಾಡ್ಜ್ ನಿಂದ ರಾಮ ಮಂದಿರವರೆಗೆ ರಸ್ತೆ ವಿಭಜಕ, ಫುಟ್ ಪಾತ್, ವಿದ್ಯುತ್ ನಿರ್ಮಾಣ ಕಾಮಗಾರಿ ಹಾಗೂ 477.00 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಗರದ ರಾಜಾಪೂರ ಬಳಿಯ ಮುಖ್ಯ ರಸ್ತೆಯ ಸೇಡಂ ರಸ್ತೆಯಿಂದ ರಿಂಗ್ ರಸ್ತೆ ವರೆಗೂ ಸೈಕಲ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗಳಿಗೂ ಸಹ ಸಿಎಂ ಬೊಮ್ಮಾಯಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ, ತೋಟಗಾರಿಕೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವ ಮುನಿರತ್ನ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಸಂಸದ ಡಾ. ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನಸಭೆ ಶಾಸಕರುಗಳಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರು, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೆÇಲೀಸ್ ಮಹಾ ನಿರೀಕ್ಷಕ ಮನೀμï ಖರ್ಬಿಕರ್, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಡಾ. ವೈ.ಎಸ್. ರವಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ ಶಶಿ, ಜಿಲ್ಲಾ ಪೆÇಲೀಸ್ ಅಧೀಕ್ಷಕಿ ಡಾ. ಸಿಮಿ ಮರಿಯಮ್ ಜಾರ್ಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲಬುರಗಿ ಅಪರ ಆಯುಕ್ತ ನಳಿನ್ ಅತುಲ್, ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು ಸೇರಿದಂತೆ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.


bengaluru

LEAVE A REPLY

Please enter your comment!
Please enter your name here