Home ಬಾಗಲಕೋಟ ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ

ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ

79
0
Karnataka Chief Minister offers 'Bagina' to River Krishna

ಬಾಗಲಕೋಟೆ:

ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ಪಿ.ಸಿ. ಗದ್ದಿಗೌಡರ್ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ಮತ್ತಿತರರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

LEAVE A REPLY

Please enter your comment!
Please enter your name here