Home ವಿಜಯನಗರ ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ

ನೂತನ ವಿಜಯನಗರ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ

76
0
Karnataka Chief Minister officially inaugurates new Vijayanagar district

ಹೊಸಪೇಟೆ:

ರಾಜ್ಯದ ೩೧ ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಇಂದಿನಿಂದ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರ್ಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ೫೬ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ನೆರವೇರಿಸಿದರು.

ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳ ಕಲರವ, ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಆನಂದ್ ಸಿಂಗ್, ಗೋವಿಂದ ಕಾರಜೋಳ, ಡಾ. ಸಿಎನ್ ಅಶ್ವತ್ಥ ನಾರಾಯಣ, ಸಿ ಸಿ ಪಾಟೀಲ್, ಬೈರತಿ ಬಸವರಾಜ ಭಾಗಿ, ಬಿ. ಶ್ರೀರಾಮುಲು, ಸುನಿಲ್ ಕುಮಾರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ಈ ಮೊದಲು ಬಳ್ಳಾರಿಗೆ ಸೇರಿದ್ದ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ ಮತ್ತು ಹರಪನಹಳ್ಳಿ ತಾಲ್ಲೂಕುಗಳು ನೂತನ ಜಿಲ್ಲೆಯ ವ್ಯಾಪ್ತಿಗೆಒಳಪಡಲಿವೆ . ಈ ಮೂಲಕ 6 ತಾಲೂಕುಗಳ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆ ಜನ್ಮ ತಾಳಿದೆ. 

Also Read: 6-taluk Vijayanagar district is born

Also Read: Vijayanagar is officially 31st Karnataka district

ಇಲ್ಲಿ ಓದಿ: ವಿಜಯನಗರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ.ಗಳ ವಿಶೇಷ ಯೋಜನೆ – ಮುಖ್ಯಮಂತ್ರಿ

LEAVE A REPLY

Please enter your comment!
Please enter your name here