ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
ಬೆಂಗಳೂರು:
ವರನಟ ಡಾ.ರಾಜಕುಮಾರ್ ಸುಪುತ್ರ, ಖ್ಯಾತ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹೊಂದಿರುವುದು ಅತೀವ ಆಘಾತವನ್ನುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಇಲ್ಲಿ ಓದಿ: ಪುನೀತ್ ರಾಜ್ ಕುಮಾರ್ ಇನ್ನಿಲ್ಲ
ಕಿರಿಯ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜನಪ್ರಿಯ ಮೇರು ನಟ, ಯುವಜನತೆಯ ಕಣ್ಮಣಿ, ಯೂಥ್ ಐಕಾನ್ ಆಗಿದ್ದ ಪುನೀತ್ ನಿಧನ ಹೊಂದಿರುವುದು ಕಲಾರಂಗಕ್ಕೆ ಬಹಳ ದೊಡ್ಡ ನಷ್ಟ, ವಿಧಿಯ ಕ್ರೂರ ಆಟ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ. pic.twitter.com/OF0aLhrqPm
— Basavaraj S Bommai (@BSBommai) October 29, 2021
“ವೈಯಕ್ತಿಕವಾಗಿ ಅತ್ಯಂತ ಆತ್ಮೀಯ ಸಹೃದಯ ಬಂಧುವನ್ನು ಕಳೆದುಕೊಂಡಿದ್ದೇನೆ. ಅವರ ಉತ್ಸಾಹ, ಪ್ರತಿಭೆ, ಅವರ ಅನೇಕ ಅತ್ಯುತ್ತಮ ಚಲನಚಿತ್ರಗಳನ್ನು, ಕನ್ನಡದ ಸಾಂಸ್ಕೃತಿಕ ರಾಯಭಾರಿಯಂತೆ ನಾಡಿನ ಸಮಸ್ತ ಜನತೆಯ ಮನೆ, ಮನ ತಲುಪಿದ್ದ ಅವರ ವ್ಯಕ್ತಿತ್ವವನ್ನು ಮರೆಯುವುದು ಸಾಧ್ಯವೇ ಇಲ್ಲ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ.”
Shocked and deeply saddened as Karnataka's most loved superstar #PuneetRajkumar is no longer with us.
— Basavaraj S Bommai (@BSBommai) October 29, 2021
A huge personal loss and one that's difficult to come to terms with.
Praying the almighty gives the Rajkumar family and fans the strength to bear this loss.#OmShanti pic.twitter.com/QpF63vKvIO
“ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಂಯಮದಿಂದ ವರ್ತಿಸಿ: ಅಭಿಮಾನಿಗಳಿಗೆ ಮನವಿ ಈ ದುಃಖಕರ ಸನ್ನಿವೇಶದಲ್ಲಿ, ಭಾವಾವೇಶಕ್ಕೆ ಒಳಗಾಗಿ ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ, ಶಾಂತಿ, ಸಂಯಮದಿಂದ ವರ್ತಿಸಿ ಅಂತಿಮ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿಗಳು ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.
ಇಲ್ಲಿ ಓದಿ: ಚಿತ್ರ ನಮನ ! ಮಾಸ್ಟರ್ ಲೋಹಿತ್ ನಿಂದ ಮಿಸ್ಟರ್ ಪುನೀತ್ ವರೆಗೆ
ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್
Condolences on the passing away of #PuneethRajkumar. A bright star. He had a long promising career ahead.
— Nirmala Sitharaman (@nsitharaman) October 29, 2021
My condolences to his family, his innumerable fans and followers. pic.twitter.com/8Gv4G4vrnz
ಪ್ರಹ್ಲಾದ್ ಜೋಶಿ
ಕನ್ನಡ ಚಿತ್ರರಂಗದ ಖ್ಯಾತ ನಟ, ಡಾ. ರಾಜಕುಮಾರ ಕುಟುಂಬದ ಕುಡಿ, ಜನಪ್ರಿಯ ನಟ, ಅತ್ಯುತ್ತಮ ಬಾಲನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಅಪ್ಪು ಎಂದೇ ಖ್ಯಾತರಾದ ಪುನೀತ್ ರಾಜಕುಮಾರ ಅವರ ನಿಧನದ ವಿಷಯದಿಂದ ತುಂಬಾ ಆಘಾತವಾಗಿದೆ.#PuneethRajkumar pic.twitter.com/wf8AVSFVRC
— Pralhad Joshi (@JoshiPralhad) October 29, 2021
ಅಕಾಲಿಕವಾಗಿ ಅಗಲಿದ ಪುನೀತ್ ; ಕಂಬನಿ ಮಿಡಿದ ಸಚಿವ ಕಾರಜೋಳ
ಆಡಿಸಿಯೇ ನೋಡು, ಬೀಳಿಸಿಯೇ ನೋಡು, ಎಂದೂ ಸೋಲದು, ಸೋತು ತಲೆಯಾ ಬಾಗದು ಎಂದು ಹೇಳುತ್ತಲೇ ನಮ್ಮನ್ನೆಲ್ಲಾ ಅಗಲಿದ ಪುನೀತ್ ರಾಜ್ ಕುಮಾರ್ ಅವರು ನಮ್ಮ ಗಂಧದ ಗುಡಿಯ ನಿಜವಾದ ರಾಜರತ್ನ ಎಂದು ಜಲಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ ಕಂಬನಿ ಮಿಡಿದಿದ್ದಾರೆ.
Also Read: Puneeth Rajkumar dies following heart attack
ಪವರ್ ಸ್ಟಾರ್ ಆಗಿದ್ದರೂ ಯಾವುದೇ ಗರ್ವವಿಲ್ಲದೇ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಸಚಿವ ಕಾರಜೋಳ ಕಂಬನಿ ಮಿಡಿದಿದ್ದಾರೆ.
ಕರುನಾಡಕುವರ, ಅಭಿಮಾನಿಗಳ ಹೃದಯ ಮನಸೂರೆಗೊಂಡಿದ್ದ ನಟ, ರಾಷ್ಟ್ರ ಪ್ರಶಸ್ತಿ ವಿಜೇತ,ಯುವ ನಟ ಪುನೀತ್ ರಾಜಕುಮಾರ್ ರವರ ಅಕಾಲಿಕ ನಿಧನದಿಂದ ಕನ್ನಡ ನಾಡು ಬಡವಾಗಿದೆ. ಈ ಸಂದರ್ಭದಲ್ಲಿ ಭಗವಂತನು ಅವರ ಆತ್ಮಕ್ಕೆ ಸದ್ಗತಿ ಮತ್ತು ಚಿರಶಾಂತಿಯನ್ನೀಯಲಿ ಹಾಗೂ ಅವರ ಕುಟುಂಬಕ್ಕೆ ಆಗಿರುವ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JQXkpCDbVa
— Govind M Karjol (@GovindKarjol) October 29, 2021
ತಂದೆ ಡಾ.ರಾಜ್ ಕುಮಾರ್ ಅವರಂತೆಯೆ ಸರಳತೆಯನ್ನು ಮೈಗೂಡಿಸಿಕೊಂಡಿದ್ದ ಪುನೀತ್, ಬಾಲನಟನಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಅವರ ಅಭಿನಯ ಜನ ಮಾನಸದಲ್ಲಿ ಅಚ್ಚಳಿಯದೇ ನಿಂತಿದೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿದ್ದ ಪುನೀತ್ ಅವರ ಮೃತ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ.
ನಟ ಪುನೀತ್ ನಿಧನಕ್ಕೆ ಸಚಿವ ಅಶ್ವತ್ಥನಾರಾಯಣ ತೀವ್ರ ಸಂತಾಪ
ಜನಪ್ರಿಯ ನಟ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
`ಪುನೀತ್ ಅವರು ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದ್ದರು. ನಾಡು-ನುಡಿ ಮತ್ತು ಸಮಾಜದ ಬಗ್ಗೆ ಅಪಾರ ಕಳಕಳಿ ಹೊಂದಿದ್ದ ಅವರನ್ನು ಕಳೆದುಕೊಂಡಿರುವುದರಿಂದ ಕನ್ನಡ ನಾಡು ಅಕ್ಷರಶಃ ಬಡವಾಗಿದೆ’ ಎಂದು ಅವರು ತಮ್ಮ ಶೋಕಸಂದೇಶದಲ್ಲಿ ದುಃಖಿಸಿದ್ದಾರೆ.
ಚಿತ್ರರಂಗದ ಪ್ರತಿಭಾವಂತ ಕಲಾವಿದ ಪುನೀತ್ ರಾಜಕುಮಾರ್ ಅವರ ಹಠಾತ್ ನಿಧನ ತೀವ್ರ ಆಘಾತ ತಂದಿದೆ.
— Dr. Ashwathnarayan C. N. (@drashwathcn) October 29, 2021
ಬಾಲನಟನಾಗಿ, ತಂದೆಗೆ ತಕ್ಕ ಮಗನಾಗಿ, ಅದ್ಭುತ ಕಲಾವಿದನಾಗಿ ಕಲಾಸೇವೆ ಮಾಡಿರುವ ಅವರು ನಾಡಿನ ಹಿತಕ್ಕಾಗಿಯೂ ಅನೇಕ ಕೊಡುಗೆ ನೀಡಿದ್ದವರು. ಅಪ್ಪು ಅವರ ಅಗಲಿಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ. #PuneethRajkumar
ಓಂ ಶಾಂತಿ. pic.twitter.com/limdwZHkoD
ರಚನಾತ್ಮಕ ಕಾರ್ಯಕ್ರಮಗಳಿಗೆ ಸದಾ ಬೆನ್ನೆಲುಬಾಗಿ ನಿಂತುಕೊಳ್ಳುತ್ತಿದ್ದ ಪುನೀತ್ ಅವರು ಇನ್ನಿಲ್ಲವೆಂದರೆ ನಂಬುವುದು ಕಷ್ಟವಾಗುತ್ತದೆ. ಅವರ ಸ್ಥಾನವನ್ನು ಬೇರೆ ಯಾರಿಂದಲೂ ತುಂಬುವುದು ಸಾಧ್ಯವಿಲ್ಲ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.
ಪುನೀತ್ ಅವರ ನಿಧನದ ನೋವನ್ನು ತಡೆದುಕೊಳ್ಳುವಂತಹ ಶಕ್ತಿಯನ್ನು ಭಗವಂತನು ಅವರ ಕುಟುಂಬದ ಸದಸ್ಯರಿಗೆ, ಬಂಧುಬಾಂಧವರಿಗೆ ಮತ್ತು ಅಭಿಮಾನಿ ಬಳಗಕ್ಕೆ ನೀಡಲಿ; ಪರಮಾತ್ಮನು ಅವರ ಆತ್ಮಕ್ಕೆ ಶಾಂತಿಯನ್ನು ಕೊಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.