Home ಬೆಂಗಳೂರು ನಗರ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದ ಮುಖ್ಯಮಂತ್ರಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಇಲ್ಲ ಎಂದ ಮುಖ್ಯಮಂತ್ರಿ

77
0
Advertisement
bengaluru

ಬೆಂಗಳೂರು:

ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು.

ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

bengaluru bengaluru

ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ ವರ್ಷಕ್ಕೆ ಒಂದು ವಾರ ನೋಡಿಕೊಂಡು ಕೆಲ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ವಿವರಿಸಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ್ ಅವರ ಜೊತೆ ಚರ್ಚೆ ಮಾಡಿದ್ದೇವೆ. ಓಮಿಕ್ರಾನ್ ಕುರಿತು ವಿವರಣೆ ನೀಡಿದ್ದಾರೆ. ಜನರು ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ಹಾಸ್ಟೆಲ್‌ಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದೇವೆ. ವಾರ್ಡನ್, ಅಡುಗೆಯವರಿಗೆ ಎರಡು ಡೋಸ್ ವ್ಯಾಕ್ಸಿನ್ ಹಾಕಿಸಿಕೊಂಡಿರಬೇಕು. ವ್ಯಾಕ್ಸಿನ್ ಡ್ರೈವ್ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ ಎಂದರು.

ಹಾಸ್ಟೆಲ್, ಕ್ಲಸ್ಟರ್ ಗೆ ಮಾತ್ರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಉಳಿದಂತೆ ಯಾವುದೇ ಹೊಸ ಗೈಡ್‌ಲೈನ್ಸ್ ಇಲ್ಲ ಎಂದರು. ಸಚಿವ ಸಂಪುಟಗೆ ಆರೋಗ್ಯ ಸಚಿವ ಸುಧಾಕರ್ ಗೈರು ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಧಾಕರ್ ಸಭೆಗೆ ಬರಲು ಸಾಧ್ಯವಾಗದು ಎಂದು ಮೊದಲೇ ತಮಗೆ ತಿಳಿಸಿ ಅನುಮತಿ ಪಡೆದುಕೊಂಡಿದ್ದರು ಎಂದು ಸಮರ್ಥಿಸಿಕೊಂಡರು.


bengaluru

LEAVE A REPLY

Please enter your comment!
Please enter your name here