ತುಮಕೂರು:
ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ (Coconut farmers) ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.
ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು.