Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka Chief Minister Siddaramaiah: ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ
  • ಬೆಂಗಳೂರು ನಗರ

Karnataka Chief Minister Siddaramaiah: ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆಗೆ ಕ್ರಮ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಭರವಸೆ

Vighnesh Pawar September 17, 2023 10:00 PM 1 minute read
Karnataka Chief Minister Siddaramaiah promises to establish Vishwakarma Study Centre

Karnataka Chief Minister Siddaramaiah promises to establish Vishwakarma Study Centre

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ರಾಜ್ಯದಲ್ಲಿ ವಿಶ್ವಕರ್ಮ ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಧುಗಿರಿ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಮಠದ ಶ್ರೀ ಶ್ರೀ ಶ್ರೀ ಡಾ.ನೀಲಕಂಠಚಾರ್ಯ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮುದಾಯದ ಮುಖಂಡರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದುಳಿದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ಇರಬೇಕಾಗುತ್ತದೆ. ಕರಕುಶಲಕರ್ಮಿಗಳಿಗೆ ಇಲಾಖೆ ರಚಿಸಬೇಕು ಎಂಬ ಬೇಡಿಕೆಯ ಬಗ್ಗೆ ಪರಿಶೀಲನೆ ಮಾಡಲಾಗುವುದು. ನೇಕಾರರಿಗೆ ಇರುವ ಸೌಲಭ್ಯಗಳ ಮಾದರಿಯಲ್ಲಿ ಸೌಲಭ್ಯಗಳು ಹಾಗೂ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇದ್ದು ಅನುದಾನ ಹೆಚ್ಚು ಮಾಡಲಾಗುವುದು ಎಂದು ಭರವಸೆ ನೀಡಿದರು.

ನಾವು ಸಮಾಜದಲ್ಲಿ ಹುಟ್ಟಿದ ಮೇಲೆ ಸಮಾಜದ ಋಣ ತೀರಿಸಬೇಕು. ಹಾಗೆ ಮಾಡುವುದೇ ನಮ್ಮೆಲ್ಲರ ಕರ್ತವ್ಯ. ನಾವು ಎಷ್ಟು ದಿನ ಬದುಕಿರುತ್ತೇವೆ ಎನ್ನುವುದು ಮುಖ್ಯ ಅಲ್ಲ. ರಾಷ್ಟ್ರ ಕವಿ ಕುವೆಂಪು ಹೇಳುವಂತೆ ಎಲ್ಲ ರೂ ವಿಶ್ವಮಾನವರಾಗಿಯೇ ಹುಟ್ಟಿದರೂ, ಬೆಳೆಯುವಾಗ ಅಲ್ಪ ಮಾನವರಾಗುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನ ಮಾಡುವುದೇ ಸಮಾಜಕ್ಕೆ ಕೊಡುವ ಕೊಡುಗೆ. ನಾವು ಮನುಷ್ಯರಾಗಿ ಬಾಳುವ ಪ್ರಯತ್ನ ಮಾಡಬೇಕು. ಧರ್ಮ, ಧರ್ಮಗಳ ನಡುವೆ ಸಂಘರ್ಷ, ಜಾತಿ ಜಾತಿಗಳ ನಡುವೆ ಸಂಘರ್ಷ ಉಂಟು ಮಾಡುತ್ತಿದ್ದಾರೆ. ಧರ್ಮ ಬದುಕಿನ ಮಾರ್ಗ. ಮನುಷ್ಯನ ಬದುಕಿಗಾಗಿ ಧರ್ಮವಿದೆ. ಯಾವ ಧರ್ಮ ಮನುಷ್ಯನನ್ನು ದ್ವೇಷಿಸುತ್ತದೆಯೋ ಅದನ್ನು ಧರ್ಮ ಎಂದು ಕರೆಯಲಾಗುವುದಿಲ್ಲ. ಬಸವಣ್ಣ ಹೇಳಿದಂತೆ ದಯೆಯೇ ಧರ್ಮದ ಮೂಲ. ಎಲ್ಲ ಧರ್ಮಗಳಿಗಿಂತ ಮನುಷ್ಯ ಧರ್ಮ ಮಿಗಿಲು. ಮನುಷ್ಯರಾಗಲು ಪ್ರಯತ್ನಿಸೋಣ. ನಾವು ಸಮಾಜದ ಋಣ ತೀರುಸುವ ಕೆಲಸ ಮಾಡಿದರೆ ಜೀವನ ಸಾರ್ಥಕವಾಗುತ್ತದೆ ಎಂದರು.

WhatsApp Image 2023 09 17 at 10.53.38 PM

ಹಿಂದೆ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಹಿಂದುಳಿದ ಜಾತಿಗಳ ಜಯಂತಿ ಹಾಗೂ ನಿಗಮಗಳನ್ನೂ ರಚನೆ ಮಾಡಲು ತೀರ್ಮಾನ ಮಾಡಿ ಹಣವನ್ನೂ ಒದಗಿಸಿದ್ದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಸಮಾಜಗಳಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬದೇ ಹೋದರೆ ಅವು ಮುಖ್ಯ ವಾಹಿನಿಗೆ ಬರುವುದು ಕಷ್ಟವಾಗುತ್ತದೆ.

ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ

ಆಯಾ ಜಾತಿಯವರೇ ತಮ್ಮ ಜಯಂತಿಗಳನ್ನು ಆಚರಣೆ ಮಾಡಿದರೆ ಜಾತಿ ಬಣ್ಣ ಬರುತ್ತದೆ. ಸರ್ಕಾರ ಮಾಡಿದರೆ ಜಾತಿ ಬಣ್ಣ ಬರುವುದಿಲ್ಲ. ನಾವು ಸರ್ವರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡುವುದರಲ್ಲಿ ನಂಬಿಕೆವುಳ್ಳವರು. ಕೆಲವೇ ಜಾತಿಗಳ ಸಮಾಜ ನಿರ್ಮಾಣವಾಗಬಾರದು. ನಮ್ಮಲ್ಲಿ ಆರ್ಥಿಕ, ಸಾಮಾಜಿಕ ಅಸಮಾನತೆ ಇದೆ. ಅನಾದಿ ಕಾಲದಿಂದಲೂ ನೈಪುಣ್ಯತೆ, ಕೌಶಲ್ಯವಿದ್ದರೂ ಆರ್ಥಿಕವಾಗಿ ಸಬಲರಲ್ಲ. ಸಬಲರಾಗಲು ಆರ್ಥಿಕ, ಸಾಮಾಜಿಕ ರಾಜಕೀಯ ಅವಕಾಶಗಳು ಸಿಗಬೇಕು. ಇಲ್ಲದಿದ್ದರೆ ಯಾವ ಜಾತಿಯೂ ಮೇಲೆ ಬರಲು ಸಾಧ್ಯವಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕವಾಗಲು, ರಾಜಕೀಯ ಪ್ರಜಾಪ್ರಭುತ್ವ ಇದ್ದರೆ ಸಾಲದು, ಆರ್ಥಿಕ ಸಾಮಾಜಿಕ ಪ್ರಜಾಪ್ರಭುತ್ವ ಇರಬೇಕು ಎಂದು ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ ಎಂದು ಪುನರುಚ್ಚರಿಸಿದರು.

ಮುಖ್ಯಮಂತ್ರಿ @siddaramaiah ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿಯನ್ನು ಉದ್ಘಾಟಿಸಿದರು. ಮಧುಗಿರಿ ನಿಟ್ಟರಹಳ್ಳಿ ಅಭಯಹಸ್ತೆ ಆದಿಲಕ್ಷ್ಮಿ ಸಂಸ್ಥಾನ ಮತ್ತು ವಿಶ್ವಕರ್ಮ ಸಂಪನ್ಮೂಲ ಮಠದ ಶ್ರೀ ಶ್ರೀ ಶ್ರೀ ಡಾ.ನೀಲಕಂಠಚಾರ್ಯ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು… pic.twitter.com/PWCO9Ps2ow

— CM of Karnataka (@CMofKarnataka) September 17, 2023

ಸ್ವಾತಂತ್ರ್ಯ ಗಳಿಸಿ 76 ವರ್ಷಗಳಾಗಿದ್ದರೂ ಸಾಮಾಜಿಕ, ಆರ್ಥಿಕ ಅಸಮಾನತೆ ಇದೆ. ಸಂವಿಧಾನದಲ್ಲಿ ಎಲ್ಲರೂ ಸಮಾನರು.ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಬದ್ಧತೆ ಇರುವವರ ಬಳಿ ಅಧಿಕಾರ ಇದ್ದರೆ ಸಮಾನತೆ ತರಲು ಸಾಧ್ಯ.

ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು

ಸಂವಿಧಾನದ ವಿರುದ್ಧ ಇರುವವರ ಬಳಿ ಅಧಿಕಾರ ಇದ್ದರೆ ಸಾಧ್ಯವಿಲ್ಲ. ಬಹುತ್ವದ ಸಮಾಜ ಉಳ್ಳ ನಾವು ಎಲ್ಲರನ್ನೂ ಒಳಗೊಂಡ ಸಮಾಜ ನಿರ್ಮಾಣ ಮಾಡಬೇಕು. ವೈವಿಧ್ಯ ತೆಯಲ್ಲಿ ಏಕತೆ ಕಾಣಬೇಕು. ಒಂದು ಧರ್ಮ ಆಧಾರಿತ ದೇಶವಲ್ಲ ಇದು. ಒಂದು ಜಾತಿ, ಭಾಷೆ ಆಧಾರಿತ ದೇಶವಲ್ಲ. ಸಹಿಷ್ಣುತೆ, ಸಹಬಾಳ್ವೆ ಎಂದು ಸಂವಿಧಾನ ಹೇಳುತ್ತದೆ ಎಂದರು.

ನಿಮ್ಮ ಧರ್ಮ ಪ್ರೀತಿಸಿ: ಇನ್ನೊಂದು ಧರ್ಮ ದ್ವೇಷಿಸದಿರಿ

ಪ್ರತಿಯೊಬ್ಬರೂ ನಮ್ಮ ನಮ್ಮ ಧರ್ಮ ಪ್ರೀತಿಸಿ, ಗೌರವಿಸಿ. ಆದರೆ ಇನ್ನೊಂದು ಧರ್ಮವನ್ನು ದ್ವೇಷಿಸಬಾರದು. ಅವರನ್ನೂ ಪ್ರೀತಿ ಗೌರವದಿಂದ ಕಂಡಾಗ ಮಾತ್ರ ನಾವು ಮನುಷ್ಯರಾಗಲು ಸಾಧ್ಯ. ಕಾಂಗ್ರೆಸ್ ಅನೇಕ ಜನರಿಗೆ ರಾಜ್ಯಸಭಾ, ವಿಧಾನಪರಿಷತ್ ಸದಸ್ಯರಾಗುವ ಅವಕಾಶ ನೀಡಿದ್ದೇವೆ. ಬಿಂಬಾ ನಾಯ್ಕರ್, ರಘು ಆಚಾರ್ಯ ಅವರನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ್ದು. ಅವಕಾಶ ದೊರೆತಾಗ ರಾಜಕೀಯ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ. ರಾಜಕೀಯ ಅಧಿಕಾರವಿಲ್ಲದಿದ್ದರೆ, ನಿಮ್ಮ ಪರವಾಗಿ ಧ್ವನಿ ಎತ್ತುವವರು ಇರುವುದಿಲ್ಲ ಎಂದರು.

ಜಾತಿ ವ್ಯವಸ್ಥೆಗೆ ಚಲನೆ ಇಲ್ಲ

ಶಿಕ್ಷಣ ಪಡೆಯದಿದ್ದರೆ ಸಮಾಜ ಮುಂದುವರೆಯುವುದಿಲ್ಲ. ಜಾತಿ ವ್ಯವಸ್ಥೆ ಜಡತ್ವದಿಂದ ಕೂಡಿದ್ದು, ಅದಕ್ಕೆ ಚಲನೆ ಇಲ್ಲ. ಸಾಮಾಜಿಕ ವ್ಯವಸ್ಥೆಗೆ ಆರ್ಥಿಕ, ಸಮಾಜಿಕ ಶಕ್ತಿ ಇಲ್ಲದಿದ್ದರೆ, ವ್ಯವಸ್ಥೆ ಬದಲಾಗುವುದಿಲ್ಲ. ಇದು ಬಂದಾಗ ಮಾತ್ರ ಚಲನೆ ಸಾಧ್ಯ. ಬದಲಾವಣೆಗೆ ವಿರುದ್ಧ ಇರುವವರು ಸಾಮಾಜಿಕ ವೈರಿಗಳು ಎಂದರು.

ಹಿಂದೇಟು ಹಾಕುವುದಿಲ್ಲ

ಸರ್ಕಾರ ಆಚರಿಸುವ ಜಯಂತಿ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ನಾನು ಹಿಂದೇಟು ಹಾಕುವುದಿಲ್ಲ. ಸರ್ಕಾರದ ವತಿಯಿಂದ ಜನಾಂಗದ ಕಾರ್ಯಕ್ರಮ ಆಚರಿಸಿದರೆ ಹೆಚ್ಚು ಮಹತ್ವ ಇರುತ್ತದೆ. ಹಾಗಾಗಿ ಸರ್ಕಾರವೇ ಅನೇಕ ಹಿಂದುಳಿದ ಜಯಂತ್ಯೋತ್ಸವವನ್ನು ಆಚರಣೆ ಮಾಡುತ್ತಿದೆ ಎಂದರು.

About the Author

Vighnesh Pawar

Subscriber

View All Posts

Post navigation

Previous: Nikhil Kumaraswamy: ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದ ನಿಖಿಲ್‌ ಕುಮಾರಸ್ವಾಮಿ
Next: Karnataka: ರಮೇಶ್ ಜಾರಕಿಹೊಳಿ — HD ಕುಮಾರಸ್ವಾಮಿ ಭೇಟಿ, ಮಾತುಕತೆ

Related Stories

ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನ ಐದು ನಗರ ಪಾಲಿಕೆಗಳ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ವಾಟ್ಸಾಪ್‌ನಲ್ಲಿ ಉಚಿತ ಇ-ಖಾತಾ ವಿತರಣೆ: ಜಿಬಿಎ

The Bengaluru Live November 17, 2026 8:24 PM
ಪತ್ರಿಕಾಗೋಷ್ಠಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಜಕ್ಕೂರು ರೈಲ್ವೆ ಮೇಲ್ಸೇತುವೆ, ಗೆದ್ದಲಹಳ್ಳಿ ರೈಲ್ವೆ ವೆಂಟ್ ಉದ್ಘಾಟನೆ; ₹436 ಕೋಟಿ ವೆಚ್ಚದ ಐಓಸಿ ಜಂಕ್ಷನ್ ರೋಟರಿ ಮೇಲ್ಸೇತುವೆಗೆ ನ.18ರಂದು ಶಂಕುಸ್ಥಾಪನೆ

The Bengaluru Live November 17, 2026 8:21 PM

Latest Post

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

November 18, 2026 7:04 AM
ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

November 18, 2026 5:12 AM
ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

November 17, 2026 11:59 PM
ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

November 17, 2026 11:02 PM
ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್ ಬೈಕಂಪಾಡಿಯ ಸಂಗ್ರಹಾಗಾರದಲ್ಲಿ ವಶಪಡಿಸಿಕೊಂಡ ಅಡುಗೆ ಎಣ್ಣೆಯ ಕ್ಯಾನ್‌ಗಳ ರಾಶಿ
  • ಕರ್ನಾಟಕ

ಬೈಕಂಪಾಡಿಯ ಬೋಲಾಸ್ ಆಗ್ರೋದಿಂದ 1,240 ಕೆ.ಜಿ ಅಡುಗೆ ಎಣ್ಣೆ ವಶ: ಹಸಿ ಕಡಲೆಕಾಯಿ ಎಣ್ಣೆಯನ್ನು ‘ಕೋಲ್ಡ್ ಪ್ರೆಸ್ಡ್’ ಎಂದು ಮರುಪ್ಯಾಕ್

November 17, 2026 11:02 PM
ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ ಬೆಂಗಳೂರು ಟೆಕ್ ಸಮ್ಮಿಟ್ 2026ರ ಮಳಿಗೆಯಲ್ಲಿ ಕರ್ನಾಟಕದ ಅಧಿಕಾರಿಗಳು ಮತ್ತು ಇಸ್ರೇಲ್ ಪ್ರತಿನಿಧಿಗಳ ಗುಂಪು ಚಿತ್ರ
  • ಕರ್ನಾಟಕ

ಕರ್ನಾಟಕ ಇಸ್ರೇಲ್ ಸಹಭಾಗಿತ್ವ: ಕ್ವಾಂಟಮ್, ಜಲ ನಿರ್ವಹಣೆ ಸಂಶೋಧನೆಗೆ ಆಸಕ್ತಿ; ಕ್ವಾಂಟಮ್ ಸಿಟಿ, ಕ್ವಾಂಟಮ್ ಇಂಡಿಯಾ ಬೆಂಗಳೂರು 2027ಕ್ಕೆ ಇಸ್ರೇಲ್ ಕಂಪನಿಗಳಿಗೆ ಆಹ್ವಾನ

November 17, 2026 10:57 PM

ನೀವು ತಪ್ಪಿಸಿಕೊಂಡಿರಬಹುದು

ಗುಂಜೂರಿನ ಶಂಕುಸ್ಥಾಪನೆ ಸಮಾರಂಭದಲ್ಲಿ ಸಚಿವ ಕೃಷ್ಣ ಬೈರೇಗೌಡ ಮತ್ತು ಇತರ ಗಣ್ಯರೊಂದಿಗೆ ವೇದಿಕೆಯಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ

The Bengaluru Live November 18, 2026 7:04 AM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ

The Bengaluru Live November 18, 2026 5:12 AM
ಬೆಂಗಳೂರಿನಲ್ಲಿ ಗೋಲ್ಡನ್ ಅಂಬೇಡ್ಕರ್ ಫೌಂಡೇಷನ್ ಸನ್ಮಾನ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿರುವವರು
  • ಕರ್ನಾಟಕ

ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ

The Bengaluru Live November 17, 2026 11:59 PM
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಿರುವ ಆರೋಗ್ಯ ಸಚಿವರು
  • ಕರ್ನಾಟಕ

ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ

The Bengaluru Live November 17, 2026 11:02 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸರ್ಕಾರದ ಗುರಿ: ಗುಂಜೂರಿನಲ್ಲಿ ವಿಶ್ವಬ್ಯಾಂಕ್ ನೆರವಿನ ಕೆಡಬ್ಲ್ಯೂಎಸ್‌ಆರ್‌ಪಿ ಅಡಿ ರೂ 2,000 ಕೋಟಿ ಮೌಲ್ಯದ ಕಾಲುವೆ, ಪ್ರವಾಹ ಕಾಮಗಾರಿಗೆ ಸಿಎಂ ಶಿವಕುಮಾರ್ ಶಂಕುಸ್ಥಾಪನೆ
  • ಕರ್ನಾಟಕ ಹವಾಮಾನ: ನವೆಂಬರ್ 24ರವರೆಗೆ ಮೂರು ವಿಭಾಗಗಳಿಗೂ ಎಚ್ಚರಿಕೆ ಇಲ್ಲ ಎಂದ IMD ಪಟ್ಟಿಕೆ
  • ಒಳಮೀಸಲಾತಿ ಅನುಷ್ಠಾನವಾಗಿದೆ, ವ್ಯಾಜ್ಯ ಬಗೆಹರಿದಿದೆ: ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ; ನವೆಂಬರ್ 26ರ ಮೈಸೂರು ಸಂವಿಧಾನ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕರೆ
  • ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರೊಂದಿಗೆ ಜಿಲ್ಲಾವಾರು ಕಾರ್ಯಕ್ರಮ ಪರಿಶೀಲಿಸಿದ ಆರೋಗ್ಯ ಸಚಿವ ಯು.ಟಿ. ಖಾದರ್: ನಿಗದಿತ ಸಮಯದಲ್ಲಿ ಅನುಷ್ಠಾನಕ್ಕೆ ಸೂಚನೆ
©Copyright 2025 The Bengaluru Live All rights reserved. | MoreNews by AF themes.