ಬೆಂಗಳೂರು:
ಸೋಮವಾರ ನಡೆಬೇಕಿದ್ದ ಜನತಾದರ್ಶನವನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟಪಡಿಸಿದೆ.
ದೆಹಲಿಯಲ್ಲಿ ಸೋಮವಾರ ಅಕ್ಟೋಬರ್ ರಂದು ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಖ್ಯಮಂತ್ರಿಗಳು ಭಾನುವಾರ ರಾತ್ರಿ ದೆಹಲಿಗೆ ತೆರಳುತ್ತಿರುವುದರಿಂದ ಸೋಮವಾರದ ಜನತಾ ದರ್ಶನ ಮುಂದೂಡಲ್ಪಟ್ಟಿದೆ.
ದೂರದ ಊರುಗಳಿಂದ ಬೆಂಗಳೂರಿಗೆ ಹೊರಡದಂತೆ ಮುಖ್ಯಮಂತ್ರಿ ಕಚೇರಿ ಅಧಿಕಾರಿಗಳು ವಿನಂತಿಸಿದ್ದಾರೆ. ಜನತಾ ದರ್ಶನದ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು. ಅಡಚಣೆಗಾಗಿ ವಿಷಾದಿಸುತ್ತೇವೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.