Home ಕರ್ನಾಟಕ ಆಗಸ್ಟ್ 15ರಂದು ಮುಖ್ಯಮಂತ್ರಿಗಳಿಂದ 5000 ಮನೆ ವಿತರಣೆ: ಸಚಿವ ವಿ.ಸೋಮಣ್ಣ

ಆಗಸ್ಟ್ 15ರಂದು ಮುಖ್ಯಮಂತ್ರಿಗಳಿಂದ 5000 ಮನೆ ವಿತರಣೆ: ಸಚಿವ ವಿ.ಸೋಮಣ್ಣ

66
0

1 ಲಕ್ಷ ಮನೆ ಮಂಜೂರಾತಿಗಾಗಿ ಬುಧವಾರದಿಂದ ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭ

ಬೆಂಗಳೂರು:

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ 1 ಲಕ್ಷ ಬಹುಮಹಡಿ ಮನೆಗಳ ಮಂಜೂರಾತಿಗೆ ಸಂಬಂಧಿಸಿದಂತೆ ಮುಂದಿನ ಬುಧವಾರದಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಆಗಸ್ಟ್ 15ರಂದು ಮುಖ್ಯಮಂತ್ರಿಗಳು 5000 ಮನೆಗಳನ್ನು ವಿತರಿಸಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಸಚಿವರು ಇಂದು 1 ಲಕ್ಷ ಬಹುಮಹಡಿ ಮನೆಗಳ ಯೋಜನೆಯ ಅನುಷ್ಠಾನ ಕುರಿತಂತೆ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ಪ್ರಕಟಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೀಮಿತವಾಗಿದ್ದ ಸೌಲಭ್ಯವನ್ನು ಬೆಂಗಳೂರು ನಗರ ಜಿಲ್ಲೆಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಆದಾಯದ ಮಿತಿಯನ್ನು 87,600 ರೂ.ಗಳಿಂದ 3 ಲಕ್ಷಕ್ಕೆ ಏರಿಸಲಾಗಿದೆ, ಹಿಂದೆ ನಗರದಲ್ಲಿ ಒಂದಿಂಚು ಭೂಮಿಯನ್ನು ಹೊಂದದೆ, ಮನೆಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿತ್ತು, ಹೀಗಾಗಿ ಈ ಹಿಂದೆ ಸ್ವೀಕರಿಸಿದ್ದ ಅರ್ಜಿಗಳನ್ನು ರದ್ದುಪಡಿಸಿ, ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.ಈ ಹಿಂದೆ ಅರ್ಜಿ ಸಲ್ಲಿಸಿದ್ದವರು ಈಗ ಹೊಸದಾಗಿ ಅರ್ಜಿ ಸಲ್ಲಿಸಬಹುದು ಎಂದೂ ಸಚಿವರು ಸ್ಪಷ್ಟಪಡಿಸಿದರು.

Somanna meeting with KHB officials

ಪ್ರಧಾನಮಂತ್ರಿಗಳ ಆಶಯದಂತೆ ಬಡವರಿಗೆ ಮನೆಗಳನ್ನು ವಿತರಿಸುವ ಈ ಯೋಜನೆಗಾಗಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಹಾಗೂ ಇನ್ನಿತರ ಸರ್ಕಾರಿ ಸಂಸ್ಥೆಗಳಿಂದ 515 ಎಕರೆ ಭೂಮಿಯನ್ನು ಪಡೆಯಲಾಗಿದೆ, ಮೊದಲ ಹಂತದಲ್ಲಿ 46,998 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, 42361 ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ, 2022ರ ನವೆಂಬರ್ ವೇಳೆಗೆ 80,000 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ವಿತರಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.

ಮನೆ ನಿರ್ಮಾಣ ಹಾಗೂ ವಿತರಣೆ ಕಾರ್ಯ ಅತ್ಯಂತ ಪಾರದರಶಕವಾಗಿ ನಡೆಯುತ್ತಿದ್ದು, ವಾಸ ಮಾಡಲು ಮನೆಯನ್ನು ಹೊಂದಿರದ ಬಡವರು ಹಾಗೂ ಆಶಕ್ತರು ಸ್ವಂತ ಸೂರು ಹೊಂದಬೇಕೆಂಬುದೆ ತಮ್ಮ ಬದ್ಧತೆಯಾಗಿದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.

ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್, ಮುಖ್ಯ ಎಂಜನಿಯರುಗಳು, ಹಾಗೂ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here