ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ಬಗ್ಗೆ ಸಾಗುತ್ತಿರುವ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಬದಲಾಯಿಸುವ ಬಗ್ಗೆ ಯಾವುದೇ ಚರ್ಚೆ ನಮ್ಮ ಪಕ್ಷದಲ್ಲಿ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
“ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. 136 ಶಾಸಕರ ಅಭಿಪ್ರಾಯ ಪಡೆದು ಸಿದ್ದರಾಮಯ್ಯನವರನ್ನು ಪಕ್ಷದ ಹೈಕಮಾಂಡ್ ನೇಮಿಸಿದೆ. ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಆಂತರಿಕ ಚರ್ಚೆಯೇ ನಡೆಯುತ್ತಿಲ್ಲ. ನಮ್ಮ ಸರ್ಕಾರ ಯಾವಾಗ ಬೀಳುತ್ತದೆ ಎನ್ನುವ ಚರ್ಚೆ ವಿಪಕ್ಷಗಳಲ್ಲೇ ನಡೆಯುತ್ತಿದೆ. ಇಂತಹ ಮಾತುಗಳಿಗೆ ನಾವು ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ,” ಎಂದು ಜಾರ್ಜ್ ಅವರು ಗಟ್ಟಿಯಾಗಿ ತಿಳಿಸಿದರು.