ಬೆಂಗಳೂರು:
ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನವನ್ನು ಕೈಗೊಂಡು ಲಸಿಕೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶಿಸಿದ್ದಾರೆ.

ಕೋವಿಡ್ ಲಸಿಕೆ ಪಡೆಯದ ಸಾರ್ವಜನಿಕರಿಗೆ ಪಿಂಚಣಿ ಮತ್ತು ಪಡಿತರವನ್ನು ನೀಡುವುದಿಲ್ಲವೆಂಬ ವರದಿಗಳು ಪತ್ರಿಕೆಗಳಲ್ಲಿ ವರದಿಯಾಗಿದ್ದು ಸರ್ಕಾರದ ಗಮನಕ್ಕೆ ಬಂದಿದೆ. ಪಿಂಚಣಿ ಹಾಗೂ ಪಡಿತರವನ್ನು ಯಾವುದೇ ಕಾರ್ಯಕ್ರಮ/ ಯೋಜನೆಗಳಿಗೆ ಜೋಡಿಸಿರುವುದಿಲ್ಲ. ಲಸಿಕಾ ಕಾರ್ಯವನ್ನು ತಪ್ಪಾಗಿ ಜೋಡಿಸಿದ್ದಲ್ಲಿ ಕೂಡಲೇ ಕೈಬಿಡಲು ಅವರು ಇಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.