Home ಬೆಂಗಳೂರು ನಗರ ದೇವೇಗೌಡರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದೇವೇಗೌಡರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

57
0
Karnataka CM Bommai calls on former PM Deve Gowda

ಬೆಂಗಳೂರು:

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಇಂದು ಬೆಂಗಳೂರಿನ ಪದ್ಮನಾಭನಗರ ಮನೆಯಲ್ಲಿ ಭೇಟಿ ಮಾಡಿ ಅನೌಪಚಾರಿಕವಾಗಿ ಮಾತುಕತೆ ನಡೆಸಿದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಶುಭಕೋರಿದರು. ಮಾಜಿ ಸಚಿವರಾದ ವಿ ಸೋಮಣ್ಣ ಎಚ್ ಡಿ ರೇವಣ್ಣ ಉಪಸ್ಥಿತರಿದ್ದರು.

ದೇವೇಗೌಡರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ದೇವೇಗೌಡರು ಒಬ್ಬ ಶ್ರೇಷ್ಠ ನಾಯಕ ಮತ್ತು ಪ್ರಧಾನಿಯಾಗಿದ್ದರು. ಅವರು ತಮ್ಮ ತಂದೆ ಎಸ್.ಆರ್. ಬೊಮ್ಮಾಯಿ ಅವರ ಜೊತೆಯೂ ಕೆಲಸ ಮಾಡಿದರು. ಆದ್ದರಿಂದ, ಅವರ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದಿದ್ದೇನೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ನೀರಾವರಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ಅವರು ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಏನನ್ನೂ ಚರ್ಚಿಸಿಲ್ಲ, ಈ ಹಿಂದೆ ಜಲಸಂಪನ್ಮೂಲ ಮಂತ್ರಿಯಾಗಿದ್ದಾಗ ಅವರ ಮಾರ್ಗದರ್ಶನವನ್ನು ಕೇಳಿದ್ದೆ ಎಂದರು.

LEAVE A REPLY

Please enter your comment!
Please enter your name here