
ಬೆಂಗಳೂರು:
ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಅವರ ಪಾರ್ಥೀವ ಶರೀರಕ್ಕೆ ಬೊಮ್ಮಾಯಿ ಅಂತಿಮ ನಮನ ಸಲ್ಲಿಸಿದರು.
ಇದನ್ನೂ ಓದಿ: ಕರ್ನಾಟಕ ನದಿ ನೀರು ಹಾಗೂ ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷ ಕೆ ಎಲ್ ಮಂಜುನಾಥ್ ಅವರು ನಿಧನ
ಜ. ಮಂಜುನಾಥ ಅವರ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಕ್ಕೆ ಭೇಟಿ ನೀಡಿದ್ದ ಸಿಎಂ ನ್ಯಾಯಮೂರ್ತಿಗಳ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಸಲ್ಲಿಸಿದ ಸೇವೆಯನ್ನು ಸಿಎಂ ಸ್ಮರಿಸಿದರು.