ಬೆಂಗಳೂರು:
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಸಿದ್ದರಾಮಯ್ಯ, ಶಿವಕುಮಾರ್ ಸೇರಿದಂತೆ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಇಂದು 8 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.