Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಆರೋಗ್ಯ
  • ಕೋವಿಡ 19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲು ಸೂಚನೆ
  • ವಿಜಯಪುರ
  • ಆರೋಗ್ಯ
  • ಕರ್ನಾಟಕ

ಕೋವಿಡ 19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲು ಸೂಚನೆ

The Bengaluru Live August 21, 2021 3:00 PM
Karnataka CM directs strict vigilance to control Covid-19 Third Wave

ಕೋವಿಡ 19 3ನೇ ಅಲೆ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲು ಸೂಚನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ವಿಜಯಪುರ:

ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್ ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೋಮ್ಮಾಯಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿಂದು ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ 19 ಮೂರನೇ ಅಲೆಯ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಆಗಮಿಸುವ ನಾಗರಿಕರ ಬಗ್ಗೆ ತೀವ್ರ ನಿಗಾ ಇಟ್ಟು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ನಿರಂತರ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಗಾ ಇಡುವಂತೆ ಸೂಚನೆ ನೀಡಿದರು.

ವಿಜಯಪುರ ಹಾಗೂ ಬಾಗಲಕೋಟ್ ಜಿಲ್ಲೆಗಳಿಗೆ ಕೋವಿಡ್ 19 ಲಸಿಕೆಗಳ ಸರಬರಾಜು ಹೆಚ್ಚಿಸಲು ಪ್ರಯತ್ನಿಸಲಾಗುವುದು. ವಿಶೇಷವಾಗಿ ಈ ಎರಡೂ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿ ದಿನಕ್ಕೆ ತಲಾ 25000 ಸಾವಿರ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು.

ಕೋವಿಡ್ 19 ಮೂರನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಹೆಚ್ಚಿನ ಐಸಿಯು ಬೆಡ್ ಗಳನ್ನು ಮೀಸಲಿಡಬೇಕು. ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನ ಇಟ್ಟು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹಾಗೂ ಅಪೌಷ್ಟಿಕತೆ ಕೊರತೆ ನೀಗಿಸಲು ಗಮನ ನೀಡಲು ಸೂಚಿಸಿದರು.

Karnataka CM directs strict vigilance to control Covid-19 Third Wave

ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಿನ ರೀತಿಯಲ್ಲಿ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕೋವಿಡ್ 19 ಮೊದಲ ಹಾಗೂ 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು 3ನೇ ಅಲೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಅವರು ಸೂಚನೆ ನೀಡಿದರು.

ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ದೊರಕಿಸಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ 22 ಕೋಟಿ ರೂ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಎ.ಎಸ್. ಶಿವಾನಂದ ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪಾಟೀಲ ನಡಹಳ್ಳಿ, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ, ಶಾಸಕ ದೊಡ್ಡನಗೌಡ ಪಾಟೀಲ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ,ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಕೃಷ್ಣೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ
Next: 29 ರಂದು ಮೈಸೂರು ರಸ್ತೆ – ಕೆಂಗೇರಿ ಮೆಟ್ರೋ ಮಾರ್ಗ ಉದ್ಘಾಟನೆ

Related Stories

ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM
ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

The Bengaluru Live November 24, 2026 8:23 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.