Home ಆರೋಗ್ಯ ಡಾ.ಪುನೀತ್‌ರಾಜ್‌ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ

ಡಾ.ಪುನೀತ್‌ರಾಜ್‌ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ

260
0
Karnataka CM Inaugurates Dr. Puneeth Rajkumar Multi Specialty Hospital in Bangalore
Advertisement
bengaluru

ಬೆಂಗಳೂರು:

ಬಿಬಿಎಂಪಿಯಿಂದ ಪಂತರಪಾಳ್ಯದಲ್ಲಿ ನಿರ್ಮಿಸಲಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಡಾ.ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡಿ ಚಾಲನೆ ನೀಡಲಾಗಿದೆ.

ಆಸ್ಪತ್ರೆಯನ್ನು ರೂ.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆಸ್ಪತ್ರೆಯಲ್ಲಿ ಮೂಲ ಸೌಕರ್ಯ, ತುರ್ತು ಚಿಕಿತ್ಸಾ ಘಟಕ, ಔಷಧಾಲಯ, ಕಚೇರಿಗಳು, ನರ್ಸ್ ಗಳಿಗೆ ಕೊಠಡಿ, ಸ್ತ್ರೀರೋಗ ವಿಭಾಗ, ಪ್ರಯೋಗಾಲಯ, ಶಸ್ತ್ರಚಿಕಿತ್ಸೆ ವಿಭಾಗ, ರಕ್ತ ಸಂಗ್ರಹ ಕೊಠಡಿ, ನವಜಾತ ಶಿಶುಗಳ ತೀವ್ರ ನಿಗಾ ಘಟಕ, ಆಪರೇಷನ್ ಥಿಯೇಟರ್, ಮಕ್ಕಳ ತೀವ್ರ ನಿಗಾ ಘಟಕಗಳನ್ನು ಸ್ಥಾಪಿಸಲಾಗಿದೆ. ಅದೇ ರೀತಿ, 15 ಎಕರೆ 08 ಗುಂಟಾ ವಿಸ್ತೀರ್ಣದ ನಾಯಂಡಹಳ್ಳಿ ಕೆರೆಯನ್ನು 7.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದರು.

ಇದೇ ವೇಳೆ ಸಚಿವ ವಿ.ಸೋಮಣ್ಣ ಅವರನ್ನು ಬೊಮ್ಮಾಯಿಯವರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ದಿವಂಗತ ನಟ ಪುನೀತರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

bengaluru bengaluru


bengaluru

LEAVE A REPLY

Please enter your comment!
Please enter your name here