Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Karnataka CM Siddaramaiah: ತೆರಿಗೆ ವಂಚನೆ-ತೆರಿಗೆ ಸೋರಿಕೆ-ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ
  • ಬೆಂಗಳೂರು ನಗರ

Karnataka CM Siddaramaiah: ತೆರಿಗೆ ವಂಚನೆ-ತೆರಿಗೆ ಸೋರಿಕೆ-ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

Vighnesh Pawar September 14, 2023 2:15 PM 1 minute read
Karnataka CM instructs for strict action against tax-evasion, tax-leakage, tax-evasion

Karnataka CM instructs for strict action against tax-evasion, tax-leakage, tax-evasion

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ವಾಸ್ತವಿಕ ಸಂಗತಿಗಳ ಮೇಲೆ ಗುರಿ ನಿಗದಿಯಾಗಿದೆ. ತೆರಿಗೆ ಸಂಗ್ರಹದ ಗುರಿ ದಾಟಲು ಯತ್ನಿಸಿ

ತೆರಿಗೆ ಸಂಗ್ರಹ ದರ ದೇಶದಲ್ಲಿಯೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ

ಮುಂದಿನ ಸಭೆ ವೇಳೆಗೆ ಪ್ರಗತಿಯ ವೇಗ ಹೆಚ್ವಿರಬೇಕು- ಸಿಎಂ ಸೂಚನೆ

ಬೆಂಗಳೂರು:

ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂದು ಮೆಚ್ವುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೆ ತೆರಿಗೆ ವಂಚಿಕೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದರು.

ಇಲಾಖೆಯು enforcement ಅನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು ಎಂದರು.

ಬೆಳವಣಿಗೆ ದರವು ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15 ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಮುಖ್ಯಮಂತ್ರಿ @siddaramaiah ಅವರು ಇಂದು ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಚರ್ಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು,… pic.twitter.com/cTJJJqk5wT

— CM of Karnataka (@CMofKarnataka) September 14, 2023

ಶೇ. 24ರ ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನುವಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಲ್ಲದೆ ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ನಿರ್ದೇಶನ ನೀಡಿದರು.

ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದರು.

ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾದ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Vighnesh Pawar

Subscriber

View All Posts

Post navigation

Previous: ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 141 ನೇ ನಿರ್ದೇಶಕರ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದರು
Next: Karnataka CM Siddaramaiah: 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Related Stories

ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಸಿಂಗಸಂದ್ರದಲ್ಲಿ ಕಟ್ಟಡದ ಮುಂದೆ ವ್ಯಕ್ತಿಯೊಬ್ಬರಿಗೆ ದಂಡದ ರಸೀದಿ ನೀಡುತ್ತಿರುವ ಸಮವಸ್ತ್ರಧಾರಿ ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್
  • ಬೆಂಗಳೂರು ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ಕಸ ಎಸೆಯುವವರ ವಿರುದ್ಧ ಕಾರ್ಯಾಚರಣೆ: ಬಿಎಸ್‌ಡಬ್ಲ್ಯುಎಂಎಲ್ ಮಾರ್ಷಲ್‌ಗಳಿಂದ 68 ಪ್ರಕರಣ, ₹76,500 ದಂಡ ವಸೂಲಿ

The Bengaluru Live November 9, 2026 11:35 AM
ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM

Latest Post

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM

ನೀವು ತಪ್ಪಿಸಿಕೊಂಡಿರಬಹುದು

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
©Copyright 2025 The Bengaluru Live All rights reserved. | MoreNews by AF themes.