ಬೆಂಗಳೂರು:
ಬಸವರಾಜ ಬೊಮ್ಮಾಯಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು ಮುಖ್ಯಮಂತ್ರಿಗಳು ಬೆಂಗಳೂರ್ ಅಭಿವೃದ್ಧಿ ಸೇರಿ ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದರೆ.
ಆರಗ ಜ್ಞಾನೇಂದ್ರ ಅವರಿಗೆ ಮಹತ್ವದ ಗೃಹ ಖಾತೆ ನೀಡಲಾಗಿದೆ. ವಿ ಸುನಿಲ್ ಕುಮಾರ್ ಅವರಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ, ಬಿ.ಸಿ.ನಾಗೇಶಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನೀಡಲಾಗಿದೆ. ಮುರುಗೇಶ ನಿರಾಣಿಗೆ ಬೃಹತ್ ಕೈಗಾರಿಕೆ ನೀಡಲಾಗಿದ್ದರೆ, ಸಿಸಿ ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ಕೊಡಲಾಗಿದೆ.
ಇಲ್ಲಿ ಓದಿ: ನಾನು ಅದೃಷ್ಟವಂತ ಮುಖ್ಯಮಂತ್ರಿ: ಬೊಮ್ಮಾಯಿ



