ಬೆಂಗಳೂರು:
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಚಾಲನೆ ನೀಡಿದರು.
ಇದೆ ಸಮಯದಲ್ಲಿ ಅವರು ಮಲ್ಲತ್ತಹಳ್ಳಿ ಕೆರೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೂ ಶಂಕುಸ್ಥಾಪನೆ ನೆರವೇರಿಸಿದರು.ಕಂದಾಯ ಸಚಿವ ಆರ್.ಅಶೋಕ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ವಸತಿ ಸಚಿವ ವಿ.ಸೋಮಣ್ಣ, ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರಾದ ಡಿ.ಕೆ.ಸುರೇಶ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಮೊದಲಾದವರು ಹಾಜರಿದ್ದರು.