
Karnataka CM Siddaramaiah clarifies: Mid Day meal workers can no longer wear bangles, it's not state government's order, it's central government's guidelines
ಬೆಂಗಳೂರು:
ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು ವ್ಯಾಪಕ ಸುದ್ದಿಯಾಗಿದೆ. ಇದಕ್ಕೆ ಕಾರ್ಯಕರ್ತೆಯರು, ಹಿಂದು ಸಂಘಟನೆಗಳು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.
ಮಧ್ಯಾಹ್ನದ ಬಿಸಿಯೂಟ ತಯಾರಿಕೆಯಲ್ಲಿನ ಗುಣಮಟ್ಟ ಸುರಕ್ಷತೆ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು ಕುರಿತಂತೆ ನೂತನ ಮಾರ್ಗಸೂಚಿಯಲ್ಲಿ ಶಿಕ್ಷಣ ಇಲಾಖೆ ಆದೇಶಿಸಿದೆ ಎಂದು ಹೇಳಲಾಗುತ್ತಿದೆ.
ಬಿಸಿಯೂಟ ತಯಾರು ಮಾಡುವ ಅಡುಗೆ ಸಿಬ್ಬಂದಿ ಬಹುತೇಕ ಮಹಿಳೆಯರು ಬಳೆ, ಬಿಂದಿಗೆ ಧರಿಸುತ್ತಾರೆ. ಆದರೆ ಇದೀಗ ಶಿಕ್ಷಣ ಇಲಾಖೆಯ ಆದೇಶದಿಂದ ಅನೇಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವಲ್ಲ ಎಂದಿದ್ದಾರೆ.
ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ.
— CM of Karnataka (@CMofKarnataka) July 16, 2023
ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ.
– ಮುಖ್ಯಮಂತ್ರಿ… pic.twitter.com/qyNtB93fpu
ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ: “ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗ ಸೂಚಿಯನ್ನು ಪ್ರಕಟಿಸಿದೆ ಎನ್ನುವ ಸುಳ್ಳು ಸುದ್ದಿಯನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ವಾಸ್ತವದಲ್ಲಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ.”